

ಮಂಗಳೂರು : ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯ 2025-26 ಸಾಲಿನ ನೂತನ ಅಧ್ಯಕ್ಷರಾಗಿ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸದಾನಂದ ಪೂಜಾರಿ ಅವಿರೋಧಯಾಗಿ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅ.17ರಂದು ನಗರದ ಐ.ಎಂ.ಎ. ಸಭಾಂಗಣದಲ್ಲಿ ಜರಗಲಿದ್ದು, ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯ ಮಾಜಿ ಅಧ್ಯಕ್ಷ ಡಾ. ವೆಂಕಟ್ರಾಯ ಪ್ರಭು ಅವರು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳ ಪದಗ್ರಹಣ ವಿಧಿವಿಧಾನವನ್ನು ನೆರವೇರಿಸಲಿರುವರು.
ಬೆಂಗಳೂರು ಗ್ರಾಮಾಂತರ ಪ್ರದೇಶ ಕ್ಷೇತ್ರದ ಸಂಸದ ಡಾ. ಸಿ. ಎನ್. ಮಂಜುನಾಥ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.
ಎಂಎಲ್‌ಸಿ ಐವನ್ ಡಿಸೋಜ, ವೆನ್‌ಲಾಕ್ ಆಸ್ಪತ್ರೆಯ ಆಧೀಕ್ಷಕ ಡಾ. ಶಿವಪ್ರಕಾಶ್ ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು. ಡಾ. ಪೂಜಾರಿ ಅವರು ನಿರ್ಗಮನ ಅಧ್ಯಕ್ಷೆ ಡಾ. ಜೆಸ್ಸಿ ಮರಿಯಾ ಡಿಸೋಜ ಅವರಿಂದ ಅಧಿಕಾರ ಸ್ವೀಕರಿಸಲಿರುವರು.
ಡಾ. ಪ್ರಕಾಶ್ ಹರಿಶ್‌ಚಂದ್ರ, ಕಾರ್ಯದರ್ಶಿ ಡಾ. ಜೂಲಿಯನ್ ಸಲ್ಡಾನ್ಹ ಕೋಶಾಧಿಕಾರಿಯಾಗಲಿರುವರು. ಸಂಸ್ಥೆಯ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಡಾ. ಪ್ರೇಮ ಡಿಕುನ್ಹ ಅಧಿಕಾರ ವಹಿಸಲಿರುವರು.