ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ; ನಟ ರಮೇಶ್​ ಅರವಿಂದ್ ಆಯ್ಕೆ

Ramesh Aravind
Published on

ಉಡುಪಿ: ಖ್ಯಾತ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಅವರು ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2022ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಳೆದ ಹದಿನೇಳು ವರುಷಗಳಿಂದ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡಲಾಗುತ್ತಿದೆ.

ಈಗಾಗಲೇ ಮಾಜಿ ಸಿಎಂ ವೀರಪ್ಪ ಮೊಯ್ಲಿ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಶ್ರೀಮತಿ ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಪ್ರಕಾಶ್ ರೈ ಹಾಗೂ ಇತರು ಪ್ರಶಸ್ತಿ ಸ್ವೀಕರಿಸಿದ್ದಾರೆ.

ಅದರಂತೆ, ಈ ಬಾರಿ ಅ.10 ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮದಿನ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ರಮೇಶ್ ಅರವಿಂದ್ ಅವರಿಗೆ ಪ್ರಧಾನ ಮಾಡಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net