Tuesday, 20th November 2018  

Vijayavani

ಕಬ್ಬು ಬೆಳಗಾರರ ಜತೆ ಸಿಎಂ ಸಭೆ - ವಿಧಾನಸೌಧಕ್ಕೆ ಆಗಮಿಸಿದ ರೈತ ಮುಖಂಡರು - ಕಬ್ಬಿನ ಬಾಕಿ ಹಣ ಕೊಡಿಸ್ತಾರಾ ಎಚ್‌ಡಿಕೆ?        ಉ-ಕ ರೈತರ ಹೋರಾಟಕ್ಕೆ ಜಾತಿ ಲೇಪನ - ನಾಲಾಯಕ್ ಅನ್ನೋದು ಕೆಟ್ಟ ಪದ ಅಲ್ಲ - ಸಿಎಂ ವಿರುದ್ಧ ಮತ್ತೆ ಗುಡುಗಿದ ಯಡಿಯೂರಪ್ಪ        ಸಿಂಪಲ್ ಮ್ಯಾರೇಜ್ ಆಗೋರಿಗೆ ಶಾಕ್‌- ಮುಜರಾಯಿ ದೇವಸ್ಥಾನದಲ್ಲಿ ಮದುವೆಗೆ ಬ್ರೇಕ್‌ - ಅರ್ಚಕರ ಮನವಿಗೆ ಇಲಾಖೆ ನಿರ್ಧಾರ        ದಿಗ್ಗಜರಿಂದಲೇ ಬಿಬಿಎಂಪಿಗೆ ಬಾಕಿ - ಜಾರ್ಜ್‌, ಹ್ಯಾರೀಸ್‌, ಕುಪೇಂದ್ರರೆಡ್ಡಿ ಕಟ್ಟಿಲ್ಲ ಟ್ಯಾಕ್ಸ್‌ - ಪಾಲಿಕೆ ದಿವಾಳಿಗೆ ಕಾರಣರಾದ್ರಾ ನಾಯಕರು        ಛತ್ತಿಸ್‌ಗಡದಲ್ಲಿ ಎರಡನೇ ಹಂತದ ಮತದಾನ -72 ವಿಧಾನಸಭಾ ಕ್ಷೇತ್ರಗಳಲ್ಲಿ ವೋಟಿಂಗ್‌ - ಮಧ್ಯ ಪ್ರದೇಶದಲ್ಲಿ ಪ್ರಧಾನಿ ರ‍್ಯಾಲಿ        ಬೆಂಗಳೂರಿಗೆ ಬಂದಿಳಿದ ನವಜೋಡಿ - ಮುಂಬೈನಿಂದ ಸಿಲಿಕಾನ್‌ ಸಿಟಿಗೆ ರಣವೀರ್‌, ದೀಪಿಕಾ - ನಾಳೆ ಲೀಲಾ ಪ್ಯಾಲೇಸ್‌ನಲ್ಲಿ ರಿಸೆಪ್ಷನ್       
Breaking News

‘ನಾನು ಅಂಬಿ ಅಭಿಮಾನಿ, ಅವರ ಬೆಂಬಲ ಕೇಳುತ್ತೇನೆ’ ಅಂದ್ರು ಮಂಡ್ಯದ ಬಿಜೆಪಿ ಅಭ್ಯರ್ಥಿ

Thursday, 18.10.2018, 6:23 PM       No Comments

ಮಂಡ್ಯ: ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯದ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ನಟ ಅಂಬರೀಷ್​ರನ್ನು ಭೇಟಿ ಮಾಡಿ ಅವರ ಬೆಂಬಲ ಕೇಳುವುದಾಗಿ ಹೇಳಿಕೊಂಡಿದ್ದಾರೆ.

ಹೌದು, ನ.3ರಂದು ನಡೆಯಲಿರುವ ಮಂಡ್ಯ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮದ್ದೂರಿನಲ್ಲಿ ಮಾತನಾಡಿ, ‘ಅಂಬರೀಷ್​ರನ್ನು ಭೇಟಿಯಾಗಿ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಬೆಂಬಲಿಸಿ ಎಂದು ಕೇಳುತ್ತೇನೆ. ನಾನು ಕೂಡ ಅಂಬರೀಷ್ ಅಭಿಮಾನಿ ಎಂದು ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು 120 ದಿನಗಳಾಗಿವೆ. ಆದರೂ ಮಂಡ್ಯಕ್ಕೆ ಏನೂ ಕೊಡುಗೆ ಕೊಟ್ಟಿಲ್ಲ ಎಂದು ಅವರು, ಬಿಎಸ್​ವೈ ಆಡಳಿತದಲ್ಲಿ ಜಿಲ್ಲೆಗೆ 150 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ನಮ್ಮ ಪಕ್ಷದ ಕಾರ್ಯಕರ್ತರು ವಿಶ್ವಾಸದಿಂದ ಕೆಲಸ ಮಾಡಿದ್ದಾರೆ. ನನಗೆ ಈ ಚುನಾವಣೆ ಗೆಲ್ಲುವ ವಿಶ್ವಾಸವಿದೆ ಎಂದರು.

ಚುನಾವಣೆಗೆ ನನ್ನ ಕುಟುಂಬದ ಬೆಂಬಲ ಇದ್ದು, ನನ್ನ ಮೇಲೆ ಜನ ಭರವಸೆ ಇಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಮಂಡ್ಯದಲ್ಲಿ ನನಗೆ ಗೆಲ್ಲುವ ಅವಕಾಶವಿದೆ. ಮೋದಿಯವರ ಹಲವಾರು ಉತ್ತಮ ಯೋಜನೆ ಆಧರಿಸಿಯಾದರೂ ಜನರು ನನಗೆ ಮತ ನೀಡುತ್ತಾರೆ ಎಂದರು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top