More

  ಡಾ.ಸಿರಿ ಪಾರ್ವತಿಗೆ ಚಿನ್ನದ ಪದಕ

  ಉಳ್ಳಾಲ: ರಾಜ್ಯದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ 2023ರಲ್ಲಿ ನಡೆಸಿದ ಎಂಡಿಎಸ್ (ಕನ್ಸರ್ವೇಟಿವ್ ಡೆಂಟಿಸ್ಟ್ರಿ ಮತ್ತು ಎಂಡೋಡೋಂಟಿಕ್ಸ್) ಪರೀಕ್ಷೆಯಲ್ಲಿ ರಾಜ್ಯಕ್ಕೆ ಡಾ.ಸಿರಿ ಪಾರ್ವತಿ ಬೀಡುಬೈಲು ಅವರು ಪ್ರಥಮ ರ‌್ಯಾಂಕ್‌ನೊಂದಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಂದ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಹಾಸನದ ಶ್ರೀ ಹಾಸನಾಂಬ ಡೆಂಟಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಅವರು ಶೇ.81.29 ಅಂಕಗಳೊಂದಿಗೆ ವಿಶಿಷ್ಟ ದಾಖಲೆ ಮಾಡಿದ್ದಾರೆ. ಈ ಹಿಂದೆ ಅವರು ಬಿಡಿಎಸ್‌ನಲ್ಲಿ ಚಿನ್ನದ ಪದಕದೊಂದಿಗೆ ಮಂಗಳೂರಿನ ಎ.ಜೆ.ಡೆಂಟಲ್ ಕಾಲೇಜಿನ ಉತ್ತಮ ವಿದ್ಯಾರ್ಥಿ ಪುರಸ್ಕಾರಕ್ಕೆ ಪಾತ್ರರಾಗಿದ್ದರು. ಅವರು ನಿವೃತ್ತ ಪ್ರಾಧ್ಯಾಪಕ ಪ್ರೊ.ಬೀಡುಬೈಲು ಗಣಪತಿ ಭಟ್ ಮತ್ತು ತ್ರಿವೇಣಿ ದಂಪತಿ ಪುತ್ರಿ. ಪ್ರಸ್ತುತ ಬೆಂಗಳೂರಿನ ದಯಾನಂದ ಸಾಗರ ದಂತ ವೈದ್ಯಕೀಯ ಕಾಲೇಜಿನಲ್ಲಿ ಹಿರಿಯ ಉಪನ್ಯಾಸಕರಾಗಿದ್ದಾರೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts