ಮತ್ತೊಮ್ಮೆ ಜನರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವ ಆಲೋಚನೆ ಸರ್ಕಾರಕ್ಕೆ ಇಲ್ಲ ಎಂದ ಆರೋಗ್ಯ ಸಚಿವ ಸುಧಾಕರ್​

Dr Sudhakar
Published on

ಧಾರವಾಡ: ಬಿಎಫ್ 7 ಆತಂಕದ ಮಧ್ಯೆ ಸಮ್ಮೇಳನ ಮತ್ತು ಯುವ ಜನೋತ್ಸವ ಕಾರ್ಯಕ್ರಮ ನಡೆಯುತ್ತೋ ಇಲ್ಲವೋ ಎನ್ನುವ ಚಿಂತೆ ಅನೇಕರಲ್ಲಿ ಹುಟ್ಟಿತ್ತು. ಈ ಬಗ್ಗೆ ಮಾತನಾಡಿರುವ ರಾಜ್ಯ ಆರೋಗ್ಯ ಸಚಿವ ಡಾ| ಸುಧಾಕರ್​ ಜನರಿಗೆ ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭದಲ್ಲೇ ಜನರ ಆರ್ಥಿಕ ಪುನಶ್ಚೇತನದ ಬಗ್ಗೆ ಯೂ ಮಾತನಾಡಿದ್ದಾರೆ.

'ಧಾರವಾಡದಲ್ಲಿ ಮಾತನಾಡಿದ ಆರೋಗ್ಯ ಸಚಿವರು 'ಯಾವುದೇ ಚಟುವಟಿಕೆಗೆ ನಿರ್ಬಂಧ ಇರುವುದಿಲ್ಲ. ಯಾರು ಗೊಂದಲ ಆಗುವುದು ಬೇಡ. ನೀವು ಸರಳ ಮುನ್ನಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ಮಾಸ್ಕ್​ ಧರಿಸುವುದು, ಬೂಸ್ಟರ್ ಡೋಸ್ ತೆಗೆದುಕೊಳ್ಳುವುದು, ಒಳಾಂಗಣ ಪ್ರದೇಶದಲ್ಲಿ ಅಂತರ ಕಾಯ್ದುಕೊಳ್ಳುವುದನ್ನು ಮಾಡಿದರೆ ಯಾವುದಕ್ಕೂ ನಿರ್ಬಂಧ ಇರೋದಿಲ್ಲ' ಎಂದು ಮಾಹಿತಿ ನೀಡಿದ್ದಾರೆ.

'ಈಗತಾನೇ ಆರ್ಥಿಕ ಪುನಶ್ಚೇತನ ಆಗುತ್ತಿದೆ. ಮತ್ತೆ ಜನರನ್ನು ಕಷ್ಟಕ್ಕೆ ದೂಡುವ ಆಲೋಚನೆ ಸರ್ಕಾರಕ್ಕಿಲ್ಲ. ಆರ್ಥಿಕ ಚಟುವಟಿಕೆ ನಿಯಂತ್ರಣದ ವಿಚಾರ ಇಲ್ಲ. ಜೀವ ಮತ್ತು ಜೀವನ ಎರಡೂ ಮುಖ್ಯ. ಜೀವ ಉಳಿಸಿ ಜೀವನ ಸುಗಮ ಮಾಡಬೇಕಿದೆ. ಆ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ' ಎಂದ ಡಾ| ಸುಧಾಕರ್​, ಜನರು ಚಿಂತೆ ಮಾಡುವ ಅಗತ್ಯ ಇಲ್ಲ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net