More

    ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿಲ್ಲ: ಆದಿಚುಂಚನಗಿರಿ ಶ್ರೀಗಳ ಭೇಟಿ ಬಳಿಕ ಡಾ. ಸುಧಾಕರ್ ಹೇಳಿಕೆ

    ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಹೆಚ್ಚುವರಿಯಾಗಿ ಆರೋಗ್ಯ ಇಲಾಖೆ ಖಾತೆ ನೀಡಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಸೋಮವಾರ ಬೆಳಗ್ಗೆ ಭೇಟಿ ನೀಡಿದ ಸಚಿವರು ಶ್ರೀ ನಿರ್ಮಲಾನಂದನಾಥ ಸ್ವಾಮಿ ಅವರ ಆಶೀರ್ವಾದ ಪಡೆದರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭಾನುವಾರ ಸಂಜೆ ಮಾನ್ಯ ಮುಖ್ಯಮಂತ್ರಿಗಳು ವೈದ್ಯಕೀಯ ಶಿಕ್ಷಣ ಖಾತೆಯೊಂದಿಗೆ ಆರೋಗ್ಯ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡು ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಮಾಣ ತಗ್ಗಿಸಿ ಜನರ ಆರೋಗ್ಯದತ್ತ ಕಾಳಜಿ ವಹಿಸಲು ಸೂಚಿಸಿದ್ದಾರೆ. ಆರೋಗ್ಯ ಮತ್ತು ವೈದ್ಯಕೀಯ ಇಲಾಖೆ ಹೊಂದಿಕೊಂಡ ಇಲಾಖೆ. ಕಾರಣಾಂತರಗಳಿಂದ 2013ರಲ್ಲಿ ಈ ಇಲಾಖೆ ಬೇರ್ಪಟ್ಟಿತ್ತು‌. ಈಗ ಯಡಿಯೂರಪ್ಪನವರು ಮತ್ತೆ ಒಟ್ಟಿಗೆ ಸೇರಿಸಿದ್ದಾರೆ. ನಾನು ಆರೋಗ್ಯ ಇಲಾಖೆಯನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತೇನೆ ಎಂದರು.

    ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿಲ್ಲ: ಆದಿಚುಂಚನಗಿರಿ ಶ್ರೀಗಳ ಭೇಟಿ ಬಳಿಕ ಡಾ. ಸುಧಾಕರ್ ಹೇಳಿಕೆಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಿದ್ದಾರೆ. ರಾಮುಲು ಜೊತೆ ದೂರವಾಣಿ ಮೂಲಕ ಮಾತಾಡಿದ್ದೇನೆ. ಇಂದು ಮತ್ತೆ ಸಮಾಲೋಚನೆ ನಡೆಸುವೆ ಎಂದ ಸುಧಾಕರ್​, ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿಲ್ಲ. ಆದರೆ, ನಾನು ಖಾತೆ ವಹಿಸಿಕೊಂಡ ಬಳಿಕ ಈ ಬಗ್ಗೆ ಪರಾಮರ್ಶೆ ಮಾಡುವೆ ಎಂದರು.

    ರಾಜ್ಯದಲ್ಲಿ ಪ್ರಮುಖವಾಗಿ ಕೋವಿಡ್ ಸೋಂಕನ್ನು ನಿಯಂತ್ರಣಕ್ಕೆ ತರುವುದು, ಸಾವಿನ ಪ್ರಮಾಣವನ್ನು ಕಡಿಮೆ ಮಾಡುವುದು, ಮಾರ್ಗಸೂಚಿ ಕ್ರಮ ಅನುಸರಿಸಿ ಕೋವಿಡ್ ಕಂಟ್ರೋಲ್ ಮಾಡಲು ಆದ್ಯತೆ ನೀಡಲಾಗುತ್ತದೆ ಎಂದು ವಿವರಿಸಿದರು.

    ಬಿಎಸ್​ವೈ ಸಂಪುಟದಲ್ಲಿ ಮಹತ್ವದ ಬದಲಾವಣೆ; ಡಾ.ಸುಧಾಕರ್​ ಹೆಗಲಿಗೆ ಆರೋಗ್ಯ ಖಾತೆ

    ಹಿಂದು ಎಂಬುದು ಧರ್ಮವೇ ಅಲ್ಲ; ಮತ್ತೊಂದು ವಿವಾದದ ಕಿಡಿ ಹಚ್ಚಿದ ಪ್ರೊ.ಭಗವಾನ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts