ಯಲಬುರ್ಗಾ: ತಾಲೂಕಿನ ಗುಳೆ ಗ್ರಾಮದಲ್ಲಿ ರಾಷ್ಟ್ರೀಯ ಬಸವ ದಳದಿಂದ ನೂತನವಾಗಿ ನಿರ್ಮಾಣಗೊಂಡ ಅನುಭವ ಮಂಟಪ ಮತ್ತು ಬಸವಣ್ಣನವರ ಮೂರ್ತಿ ಅನಾವರಣ ಕಾರ್ಯಕ್ರಮ ನಿಮಿತ್ತ ಹಮ್ಮಿಕೊಂಡಿರುವ ಹನ್ನೆರಡು ದಿನಗಳ ಕಾಲ ಕಲ್ಯಾಣ ದರ್ಶನ ಪ್ರವಚನಕ್ಕೆ ಡಿ.18ರಂದು ಆಶೀರ್ವಚನ ನೀಡಲು ಡಂಬಳ-ಗದಗ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಆಗಮಿಸಲಿದ್ದಾರೆ.
ಆದ್ದರಿಂದ ಹೆಚ್ಚಿನ ಸಂಖ್ಯೆಯ ಬಸವ ಅನುಯಾಯಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಕಾರಣರಾಗಬೇಕು ಎಂದು ಬಸವ ದಳದ ಕಾರ್ಯದರ್ಶಿ ಬಸವರಾಜ ಹೂಗಾರ ತಿಳಿಸಿದರು.