

ಉಪ್ಪಿನಂಗಡಿ: ಉಪ್ಪಿನಂಗಡಿ ಸರ್ಕಾರಿ ಮಾದರಿ ಶಾಲೆಯ ಮಕ್ಕಳ ಆರೋಗ್ಯ ರಕ್ಷಿಸುವ ಸಲುವಾಗಿ ಗಬ್ಬೆದ್ದು ನಾರುತ್ತಿರುವ ಚರಂಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಿ ಎಂದು ಶಾಲಾ ಎಸ್‌ಡಿಎಂಸಿ ಹಾಗೂ ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರಿಗೆ ಮನವಿ ಸಲ್ಲಿಸಿದರು.
ಚರಂಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಹರಿದು ಹೋಗದೆ ಅಲ್ಲಲ್ಲಿ ನೀರು ನಿಂತು ಭಾರಿ ಪ್ರಮಾಣದಲ್ಲಿ ಸೊಳ್ಳೆ ಉತ್ಪಾದನೆಯಾಗುತ್ತಿದೆ. ದುರ್ನಾತ ಬೀರುತ್ತಿದ್ದು ಮಕ್ಕಳು ಪದೇಪದೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ನಿಯೋಗ ತಿಳಿಸಿತು.
ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ಮಜೀದ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ ಕುಮಾರ್ ಕಲ್ಲಳಿಕೆ, ಪದಾಧಿಕಾರಿ ಅಬ್ದುಲ್ ರಹಿಮಾನ್ ಯೂನಿಕ್, ಎಸ್‌ಡಿಎಂಸಿ ಉಪಾಧ್ಯಕ್ಷೆ ಶೀಲಾ ಪದವು, ಸದಸ್ಯರಾದ ಕಲಂದರ್ ಶಾಫಿ, ಫಾರೂಕ್ ಜಿಂದಗಿ, ಬಿ.ನೆಬಿಸಾ, ಮೊಯ್ದಿನ್ ಕುಟ್ಟಿ, ಮುಖ್ಯಶಿಕ್ಷಕ ಹನುಮಂತಯ್ಯ ಉಪಸ್ಥಿತರಿದ್ದರು.