25.5 C
Bangalore
Monday, December 16, 2019

ಚರಂಡಿ ಹೂಳು ತೆರವು

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಹರಿಪ್ರಸಾದ್ ನಂದಳಿಕೆ ಬೆಳ್ಮಣ್ 

- Advertisement -

ನೀರಿಗಾಗಿ ಎಲ್ಲೆಡೆ ಹಾಹಾಕಾರವಿದ್ದರೂ ಪಂಚಾಯಿತಿ ವ್ಯಾಪ್ತಿಯ ಜನರಿಗೆ ನೀರೊದಗಿಸಿ ಜಲ ಪೂರೈಕೆಯಲ್ಲಿ ಮನೆಮಾತಾಗಿದ್ದ ಮುಂಡ್ಕೂರು ಗ್ರಾಮ ಪಂಚಾಯಿತಿ ಪ್ರಸಕ್ತ ಮಳೆಗಾಲ ಆರಂಭಗೊಳ್ಳುವ ಮೊದಲೇ ಮಳೆ ನೀರು ಹರಿದು ಹೋಗಲು ಚರಂಡಿ ಸಿದ್ಧಗೊಳಿಸುತ್ತಿದೆ. ಹೂಳು ತುಂಬಿದ ಚರಂಡಿ ಸ್ವಚ್ಛಗೊಳಿಸಿ ಜನರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

ಮುಂಡ್ಕೂರು ಗ್ರಾಪಂನ ಡಾ.ಬಾಲಕೃಷ್ಣ ಆಳ್ವರ ಶಾಪ್‌ನಿಂದ ನವಭಾರತ್ ಹೋಟೆಲ್‌ವರೆಗಿನ ರಸ್ತೆಯ ಎರಡೂ ಕಡೆ ಚರಂಡಿ ಮಣ್ಣಿನಿಂದ ತುಂಬಿ ಹೋಗಿ ಪ್ರತಿವರ್ಷವೂ ಮಳೆಗಾಲದಲ್ಲಿ ನೀರು ರಸ್ತೆಯ ಮೇಲೆ ಹರಿದು ಅಂಗಡಿ ಮುಂಗಟ್ಟುಗಳನ್ನು ಪ್ರವೇಶಿಸುತ್ತಿತ್ತು. ಶುಕ್ರವಾರ ಪಂಚಾಯಿತಿ ವತಿಯಿಂದ ಈ ಚರಂಡಿಗಳ ಹೂಳು ತೆಗೆದು ಸ್ವಚ್ಛಗೊಳಿಸಿ ನೀರು ನಿರಾತಂಕವಾಗಿ ಹರಿದು ಹೋಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.
ಕಳೆದ ವರ್ಷ ರಸ್ತೆಯೇ ಮುಳುಗಿತ್ತು

ಕಳೆದ ವರ್ಷ ಸುರಿದ ಧಾರಾಕಾರ ಮಳೆಗೆ ಮುಂಡ್ಕೂರು ಪೇಟೆಯ ಚರಂಡಿಗಳು ಹೂಳು ತುಂಬಿದ ಚರಂಡಿಯ ಮೇಲಿಂದ ನೀರು ಹರಿದು ರಸ್ತೆಯೆಲ್ಲ ಮುಳುಗಿ ಮುಂಡ್ಕೂರು ಪೇಟೆ ನೀರಿನಿಂದಾವೃತಗೊಂಡಿತ್ತು. ಚರಂಡಿ ಅವ್ಯವಸ್ಥೆ ಈ ಬಗ್ಗೆ ಪಂಚಾಯಿತಿ ವಿರುದ್ಧ ಜನ ತೀವ್ರ ಆಕ್ರೋಶಗೊಂಡಿದ್ದರು. ಆದರೆ ಈ ಬಾರಿ ಪಂಚಾಯಿತಿ ಆಡಳಿತ ಮಳೆ ಬೀಳುವ ಮುನ್ನವೇ ಚರಂಡಿ ಸ್ವಚ್ಛತೆಗೆ ಮುಂದಾಗಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಮುಂಡ್ಕೂರು ಪೇಟೆ ಹೊರತು ಪಡಿಸಿ ಇನ್ನೂ ಕೆಲವೆಡೆ ಇಂಥದೇ ಪರಿಸ್ಥಿತಿ ಇದೆ. ಜಾರಿಗೆಕಟ್ಟೆ, ಸಂಕಲಕರಿಯ, ಸಚ್ಚೇರಿಪೇಟೆಗಳಲ್ಲಿಯೂ ಚರಂಡಿಯಲ್ಲಿ ಹೂಳು ತುಂಬಿ ಮಳೆಗಾಲಕ್ಕೆ ರಸ್ತೆಯ ಮೇಲೆಯೇ ನೀರು ಹರಿಯುವ ಸಾಧ್ಯತೆ ಇದೆ. ಲೋಕೋಪಯೋಗಿ ಇಲಾಖೆಗೆ ಸಂಬಂಧಪಟ್ಟ ಚರಂಡಿಯಾಗಿದ್ದರೂ ಮುಂಡ್ಕೂರು ಪಂಚಾಯಿತಿ ವ್ಯಾಪ್ತಿಯ ಜನ ತೊಂದರೆ ಅನುಭವಿಸುತ್ತಿರುವುದರಿಂದ ಪಂಚಾಯಿತಿ ಆಡಳಿತ ತಾತ್ಕಾಲಿಕ ಪರಿಹಾರ ನೀಡಬೇಕೆಂದು ಜನ ಆಗ್ರಹಿಸಿದ್ದಾರೆ.

ಇದೊಂದು ತಾತ್ಕಾಲಿಕ ಪರಿಹಾರ. ಪಂಚಾಯಿತಿ ನಡೆ ಉತ್ತಮವಾದುದು. ಮುಂದೆ ಚರಂಡಿಯಲ್ಲಿ ಹೂಳು ತುಂಬದಂತೆ ಪಂಚಾಯಿತಿ ಅಥವಾ ಲೋಕೋಪಯೋಗಿ ಇಲಾಖೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ.
ಸುನೀಲ್ ಮುಂಡ್ಕೂರು ಸ್ಥಳೀಯ ನಿವಾಸಿ

ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಚರಂಡಿ ಹೂಳೆತ್ತುವ ಕೆಲಸ ನಡೆಸಲಾಗುತ್ತಿದೆ. ಈಗಾಗಲೇ ಈ ಜಾಗದಲ್ಲಿ ಮೋರಿ ನಿರ್ಮಾಣಗೊಂಡಿದ್ದರೂ ಭಾರಿ ಮಳೆಗೆ ಹೂಳು ತುಂಬುತ್ತದೆ. ಜನರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಮಳೆ ಬೀಳುವ ಮುನ್ನವೇ ಚರಂಡಿ ಹೂಳೆತ್ತಲಾಗುತ್ತಿದೆ.
ಶಶಿಧರ ಆಚಾರ್ಯ ಮುಂಡ್ಕೂರು ಗ್ರಾಪಂ ಪಿಡಿಒ

ಮುಂಡ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇತರ ಕಡೆಗಳಲ್ಲಿರುವ ಇಂಥ ಸಮಸ್ಯೆಗಳನ್ನೂ ಪರಿಹರಿಸಲಾಗುವುದು. ಮುನ್ನೆಚ್ಚರಿಕೆ ಕ್ರಮವಾಗಿ ಈ ಕೆಲಸ ನಡೆಯುತ್ತಿದೆ. ಮುಂದೆ ಶಾಶ್ವತ ಕಾಮಗಾರಿ ನಡೆಸಲಾಗುವುದು.
ಶುಭಾ ಪಿ.ಶೆಟ್ಟಿ ಮುಂಡ್ಕೂರು ಗ್ರಾಪಂ ಅಧ್ಯಕ್ಷೆ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...