ಚರಂಡಿ ಕಾಮಗಾರಿ ಕಳಪೆ,

ಮದ್ದೂರು: ತಾಲೂಕಿನ ಯರಗನಹಳ್ಳಿ ಗ್ರಾಮದಲ್ಲಿ (ಹನುಮಂತಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ) ನಡೆಯುತ್ತಿರುವ ಚರಂಡಿ ಕಾಮಗಾರಿ ಕಳಪೆಗಿದೆ ಎಂದು ಆರೋಪಿಸಿ ನಿವಾಸಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಚರಂಡಿ ಕಾಮಗಾರಿ ಮಾಡುತ್ತಿರುವ ಸ್ಥಳಕ್ಕೆ ಆಗಮಿಸಿದ ನಿವಾಸಿಗಳು ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಶಿವರಾಮು ಮಾತನಾಡಿ, ಕಾಮಗಾರಿ ಕಳಪೆಯಾಗಿದೆ. ಉತ್ತಮ ಗುಣಮಟ್ಟದ ಸಿಮೆಂಟ್, ಕಬ್ಬಿಣ ಹಾಕುತ್ತಿಲ್ಲ. ಹಾಗಾಗಿ ಚರಂಡಿ ಮಾಡಿದರೂ ಪ್ರಯೋಜನವಿಲ್ಲ ಎಂದು ದೂರಿದರು.

ಕಾಮಗಾರಿ ವಿಳಂಬವಾಗಿದ್ದು ಮನೆಯ ಮುಂದೆ ಓಡಾಡಲು ಸಾಧ್ಯವಾಗುತ್ತಿಲ್ಲ. ಮಳೆ ಬಂದರೆ ರಸ್ತೆ ಕೆಸರುಗದ್ದೆಯಂತಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡು ಗುಣಮಟ್ಟದ ಕಾಮಗಾರಿ ಮಾಡಿ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಚನ್ನಮ್ಮ, ಶೈಲಜಾ, ತಾಯಮ್ಮ, ಜಯಮ್ಮ, ತಮ್ಮಯ್ಯ, ಅಭಿಷೇಕ್, ಶಂಕರ್, ಶ್ರುತಿ ಮೊದಲಾದವರು ಇದ್ದರು.