More

    ಕಲೆ, ಸಂಸ್ಕೃತಿ ಬೆಳೆಸುವ ನಾಟಕ: ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ ಅಭಿಮತ

    ಮಂಡ್ಯ: ನಮ್ಮ ಕಲೆ, ಸಂಸ್ಕೃತಿಯನ್ನು ಬೆಳೆಸುವ ಶಕ್ತಿ ನಾಟಕಗಳಿಗಿವೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.
    ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಬಳಗದಿಂದ ಆಯೋಜಿಸಿ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಮಾಯಣ, ಮಹಾಭಾರತ ನಮ್ಮ ಬದುಕಿನ ಶೈಲಿಯನ್ನು ರೂಪಿಸುತ್ತವೆ. ಶಿಕ್ಷಕರೇ ನಾಟಕ ಪ್ರದರ್ಶನ ನೀಡುತ್ತಿರುವುದು ಮೆಚ್ಚುಗೆ ವಿಷಯ ಎಂದರು.
    ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಂಭೂಗೌಡ ಮಾತನಾಡಿ, ಶಿಕ್ಷಕರು ನಿತ್ಯ ಪಾಠ ಪ್ರವಚನದಲ್ಲಿ ನಿರತರಾಗಿರುತ್ತಾರೆ. ಒತ್ತಡದಿಂದ ಹೊರಬರಲು ನಾಟಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಜತೆಗೆ ತಮ್ಮ ಪ್ರತಿಭೆ ಅನಾವರಣಗೊಳಿಸಿದ್ದಾರೆ. ಇದರೊಂದಿಗೆ ನಾಟಕ ಕಲೆಗೆ ಪ್ರೋತ್ಸಾಹ ನೀಡಿದಂತಾಗಿದೆ ಎಂದರು.
    ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಂ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಆರ್.ದೇವರಾಜು, ಈಶ್ವರ್, ದೈಹಿಕ ಶಿಕ್ಷಣಾಧಿಕಾರಿ ವಿಜಯಕುಮಾರ್, ಉತ್ತರ ವಲಯ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಜಿ.ಅಶೋಕ್, ಕಾರ್ಯದರ್ಶಿ ಕೆ.ಆರ್.ಶಶಿಧರ ಈಚಗೆರೆ, ಸಂಘಟನಾ ಕಾರ್ಯದರ್ಶಿ ಎನ್.ಗೋಪಿನಾಥ್, ದಕ್ಷಿಣ ವಲಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ ಮಂಗಲ, ಕಾರ್ಯದರ್ಶಿ ಶಿವಕುಮಾರ್, ಜೋಗಿಗೌಡ, ಯತಿರಾಜ್, ರಾಮಸಂಜೀವಯ್ಯ, ಕಾಸಯ್ಯ, ಶ್ರೀನಿವಾಸ್, ಮಾದೇಶ್, ರಂಗಸ್ವಾಮಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts