More

  ನಾಟಕದಲ್ಲಿ ಪ್ರಧಾನಿ ‌ನರೇಂದ್ರ ಮೋದಿ ನಿಂದನೆ: ಶಿಕ್ಷಣ ಸಂಸ್ಥೆ ವಿರುದ್ಧ ಕೇಸು ದಾಖಲು

  ಬೀದರ್​: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಾಟಕದಲ್ಲಿ ಕೆಟ್ಟ ಪದ ಬಳಸಿದ ಹಿನ್ನೆಲೆಯಲ್ಲಿ ಶಾಹೀನ್​ ಶಿಕ್ಷಣ ಸಂಸ್ಥೆ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.

  ಶಾಲೆಯ ವಿದ್ಯಾರ್ಥಿಗಳು ನಾಟಕದಲ್ಲಿ ಸಿಎಎ ಹಾಗೂ ಎನ್​ಆರ್​ಸಿ ಜಾರಿಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪ್ರದರ್ಶನ ನೀಡಿದ್ದರು. ಈ ವೇಳೆ ಚಹ ಮಾರುತ್ತಿದ್ದ ವ್ಯಕ್ತಿ ಈಗ ನಮ್ಮ ಬಳಿ ದಾಖಲೆ ಕೇಳುತ್ತಾನೆ ಎಂದು ಹೇಳಿ ನಿಂದಿಸಿದ್ದರು. ವಿದ್ಯಾರ್ಥಿಗಳು ಈ ಸಂಭಾಷಣೆ ಹೇಳುವಾಗ ವೇದಿಕೆಯಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದರು. ಸಾಮಾಜಿಕ ಜಾಲ ತಾಣದಲ್ಲಿ ನಾಟಕದ ಈ ದೃಶ್ಯ ವೈರಲ್​ ಆಗಿತ್ತು. ಸಾಮಾಜಿಕ ಕಾರ್ಯಕರ್ತ ನೀಲೇಶ್ ಎಂಬುವವರು ಶಿಕ್ಷಣ ಸಂಸ್ಥೆ ಯ ಮುಖ್ಯಸ್ಥ ಡಾ. ಅಬ್ದುಲ್ ಖದೀರ್ ಸೇರಿದಂತೆ ಮೂವರ ವಿರುದ್ಧ ನ್ಯೂಟೌನ್​ ಪೊಲೀಸ್​ ಠಾಣೆಗೆ ದೇಶ ದ್ರೋಹ ಕಾಯ್ದೆ ಅಡಿ ದೂರು ನೀಡಿದರು.

  ಶಾಲೆಯಲ್ಲಿ ನಡೆದ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts