VIDEO| ನಿರ್ಮಾಣ ಹಂತದಲ್ಲಿದ್ದ ಮುಂಬೈ-ಗೋವಾ ಚತುಷ್ಪಥ ಹೆದ್ದಾರಿ ಮೇಲ್ಸೇತುವೆ ಕುಸಿತ

Bridge Collapse
Published on

ಮುಂಬೈ: ನಿರ್ಮಾಣ ಹಂತದಲ್ಲಿದ್ದ ಚತುಷ್ಪಥ ಹೆದ್ದಾರಿಯ ಮೇಲ್ಸೇತುವೆ ಕುಸಿದಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲುನ್​ನಲ್ಲಿ ನಡೆದಿದೆ. ಮುಂಬೈ-ಗೋವಾ ನಡುವಿನ ಚತುಷ್ಪಥ ಹೆದ್ದಾರಿಯ ಮೇಲ್ಸೇತುವೆಯ ಒಂದು ಭಾಗ ಕುಸಿದಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಮೇಲ್ಸೇತುವೆ ಕುಸಿತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಳಪೆ ಕಾಮಗಾರಿಯೇ ಸೇತುವೆ ಕುಸಿತಕ್ಕೆ ಕಾರಣ ಎಂದು ಹಲವರು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಚಿಪ್ಲುನ್​ ಪ್ರದೇಶದಲ್ಲಿ ಮುಂಬೈ ಹಾಗೂ ಗೋವಾಗೆ ಸಂಪರ್ಕ ಕಲ್ಪಿಸುವ ಚತುಷ್ಪಥ ಹೆದ್ದಾರಿಯ ಮೇಲ್ಸೇತುವೆಯ ಒಂದು ಭಾಗ ಕುಸಿದಿದೆ. ಮೇಲ್ನೋಟಕ್ಕೆ ಕಳಪೆ ಕಾಮಗಾರಿ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಂದು ವೇಳೆ ಕಾಮಗಾರಿಯಲ್ಲಿ ಯಾವುದಾದರು ಲೋಪದೋಷ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net