More

    ಬರ ನಿರ್ವಹಣೆ, ಸಹಾಯವಾಣಿ ಕೇಂದ್ರ

    ತುಮಕೂರು: ಬರ ನಿರ್ವಹಣೆಗಾಗಿ ಜಿಲ್ಲೆಯ 10 ತಾಲೂಕು ಕೇಂದ್ರ ಹಾಗೂ 3 ಉಪವಿಭಾಗಾಧಿಕಾರಿಗಳ ಕಚೇರಿಗಳಲ್ಲಿಯೂ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ.

    ರೈತರ ಬೆಳೆ ನಷ್ಟ ಪರಿಹಾರ, ಕುಡಿಯುವ ನೀರಿನ ಸರಬರಾಜು ಮತ್ತು ಮೇವು ಲಭ್ಯತೆ ಸೇರಿದಂತೆ ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ಸಾರ್ವಜನಿಕರ ಕುಂದು ಕೊರತೆಯನ್ನು ಅವಲೋಕಿಸುವ ನಿಟ್ಟಿನಿಂದ ಜಿಲ್ಲಾ ಮಟ್ಟ ಮತ್ತು ಎಲ್ಲಾ ತಾಲೂಕು ಕಚೇರಿಗಳಲ್ಲಿ ತೆರೆದಿರುವ ಸಹಾಯವಾಣಿ ಕೇಂದ್ರಗಳು ಕಚೇರಿ ಸಮಯದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಬರ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಅಥವಾ ನೇರವಾಗಿ ತಾಲೂಕು ಕೇಂದ್ರಗಳಿಗೂ ಭೇಟಿ ನೀಡಿ ಮಾಹಿತಿ ನೀಡಬಹುದಾಗಿದೆ. ಸಂಬಂಧಿಸಿದವರು ತುಮಕೂರು ಜಿಲ್ಲೆ: 8162278718, ಚಿಕ್ಕನಾಯಕನಹಳ್ಳಿ ತಾಲೂಕು: 08133-267242, ಗುಬ್ಬಿ: 08131-222234, ಕೊರಟಗೆರೆ: 08138-232153, ಕುಣಿಗಲ್: 08132-220239, ಮಧುಗಿರಿ: 08137-200500, ಪಾವಗಡ: 08136-244242, ಶಿರಾ: 08135-200842, ತಿಪಟೂರು: 08134-251039, ತುಮಕೂರು: 0816-2278496, ತುರುವೇಕೆರೆ: 08139-287325ಅನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ. ತಾಲೂಕು ಕಚೇರಿಯಲ್ಲದೆ ತುಮಕೂರು ಉಪವಿಭಾಗಾಧಿಕಾರಿಗಳ ಕಚೇರಿ(0816-2278493), ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ(08134-251085) ಹಾಗೂ ಮಧುಗಿರಿ ಉಪವಿಭಾಗಾಧಿಕಾರಿಗಳ ಕಚೇರಿ(08137-200822)ಯಲ್ಲಿಯೂ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts