

ಬೆಂಗಳೂರು: ಕರ್ನಾಟಕ ರಾಜ್ಯದ ಮುಕ್ತ ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ಹಲಸೆ ಸುದ್ದಿಗೋಷ್ಠಿ ನಡೆಸಿ, ಮೈಸೂರಿನ ಮಾನಸಗಂಗೋತ್ರಿ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 18ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ (ಡಿ.ಲಿಟ್) ಪ್ರದಾನ ಮಾಡಲಾಗುತ್ತಿದೆ. ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಎನ್. ರಾಮಚಂದ್ರಯ್ಯ, ಶ್ರೀ ವೆಂಕಟಲಕ್ಷ್ಮೀ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ ಎಂದಿದ್ದಾರೆ.
ವಿವಿಯ 18ನೇ ವಾರ್ಷಿಕ ಘಟಿಕೋತ್ಸ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ. 1 ಪಿಎಚ್ಡಿ, 44 ಚಿನ್ನದ ಪದಕ ಮತ್ತು 27 ನಗದು ಬಹುಮಾನ ವಿತರಣೆ ಮಾಡಲಾಗುತ್ತದೆ. ರಾಜ್ಯಪಾಲ ಥಾವರ ಚಂದ್ ಗೆಹಲೊಟ್ ರಿಂದ ಪ್ರಧಾನ ನಡೆಯಲಿದೆ.