ICC Men’s T20 World Cup: ಮೊದಲ ಪಂದ್ಯಕ್ಕೂ ಮುನ್ನವೇ ಆಟಗಾರರಿಗೆ ವಾರ್ನಿಂಗ್​ ಕೊಟ್ಟ ರಾಹುಲ್​ ಡ್ರಾವಿಡ್​!

2 Min Read
Rahul Dravid

ನ್ಯೂಯಾರ್ಕ್​: ಟಿ20 ವಿಶ್ವಕಪ್ ಗೆಲ್ಲಲು ಟೀಮ್​ ಇಂಡಿಯಾ ಅಮೆರಿಕದಲ್ಲಿ ಬೀಡುಬಿಟ್ಟಿದೆ. ಈ ಬಾರಿ ಕಪ್‌ನೊಂದಿಗೆ ಭಾರತಕ್ಕೆ ಮರಳುವ ನಿರೀಕ್ಷೆಯಲ್ಲಿದೆ. ಹೀಗಾಗಿ ಕಠಿಣ ಅಭ್ಯಾಸದಲ್ಲಿ ತೊಡಗಿದೆ. ಬಾಂಗ್ಲಾದೇಶ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ದಾಖಲಿಸಿತು ಮತ್ತು ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ರಿಷಭ್​ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಮಿಂಚಿದರು. ಜೂನ್​ 1ರಿಂದ ಟೂರ್ನಿ ಅರಂಭವಾಗಿದ್ದು, ಜೂ.05ರಂದು ಐರ್ಲೆಂಡ್​ ವಿರುದ್ಧ ಟೀಮ್​ ಇಂಡಿಯಾ ತನ್ನ ಮೊದಲ ಲೀಗ್​ ಪಂದ್ಯವನ್ನು ಎದುರಿಸಲಿದೆ. ಇದಕ್ಕೂ ಮುನ್ನವೇ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಿರು ವಿಶ್ವಕಪ್ ಅಂಗವಾಗಿ ಬಾಂಗ್ಲಾದೇಶ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದ್ದು ಗೊತ್ತೇ ಇದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಿತು. ಆದರೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಈ ಮೈದಾನದಲ್ಲಿ ಆಡುವಾಗ ತುಂಬಾ ಎಚ್ಚರಿಕೆ ವಹಿಸುವಂತೆ ತಂಡಕ್ಕೆ ಸಲಹೆ ನೀಡಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ನಮ್ಮ ಆಟಗಾರರು ಸಂಪೂರ್ಣ ಪ್ರಾಬಲ್ಯ ಮೆರೆದರು. ಅವರು ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಮಿಂಚಿದರು. ಪಿಚ್ ಹೇಗೆ ಬದಲಾಗುತ್ತದೆ ಎಂಬುದರ ಬಗ್ಗೆ ನಮಗೆ ಅರಿವು ಮೂಡಿದೆ. ಈ ಮೈದಾನದಲ್ಲಿ ಫೀಲ್ಡಿಂಗ್ ಮಾಡುವಾಗ ಆಟಗಾರರು ತುಂಬಾ ಜಾಗರೂಕರಾಗಿರಬೇಕು. ಏಕೆಂದರೆ, ಗಾಯಗಳಾಗುವ ಸಾಧ್ಯತೆ ಇದೆ. ಹೀಗಾಗಿ ತುಂಬಾ ಎಚ್ಚರಿಕೆ ವಹಿಸಿ ಎಂದು ಮೊದಲ ಪಂದ್ಯಕ್ಕೂ ಮುನ್ನವೇ ಟೀಮ್​ ಇಂಡಿಯಾ ಆಟಗಾರರಿಗೆ ದ್ರಾವಿಡ್ ಎಚ್ಚರಿಕೆ ನೀಡಿದ್ದಾರೆ. ಇಂತಹ ಮೈದಾನಗಳಲ್ಲಿ ಆಟಗಾರರು ಗಾಯಗೊಳ್ಳುವ ಸಾಧ್ಯತೆಗಳಿವೆ ಎಂಬುದನ್ನು ದ್ರಾವಿಡ್ ಮೊದಲೇ ಗ್ರಹಿಸಿದ್ದಾರೆ.

ಇದೇ ವೇಳೆ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ಟೀಮ್​ ಇಂಡಿಯಾ ಮೂರು ಪಂದ್ಯಗಳನ್ನು ಆಡಲಿದೆ. ಮತ್ತೊಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಇಡೀ ವಿಶ್ವವೇ ಕಾಯುತ್ತಿರುವ ಭಾರತ-ಪಾಕ್ ಪಂದ್ಯವೂ ಇದೇ ಮೈದಾನದಲ್ಲಿ ನಡೆಯಲಿದೆ. ಆಟಗಾರರಿಗೆ ಗಾಯವಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಭಾವಿಸಿ ರಾಹುಲ್ ದ್ರಾವಿಡ್ ಈ ಸಲಹೆಗಳನ್ನು ನೀಡಿದ್ದಾರೆ.

See also  ಸಂತಾನ ಶಕ್ತಿಹರಣಕ್ಕೆ ಪುರುಷರ ಹಿಂದೇಟು, ಎನ್‌ಎಸ್‌ವಿ ಅಂದರೇನು ಗೊತ್ತಾ ?

ಇನ್ನು ಈ ಮೆಗಾಟೂರ್ನಮೆಂಟ್‌ನಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ಅನ್ನು ಎದುರಿಸಲಿದೆ. ಈ ಪಂದ್ಯ ಜೂನ್ 5 ರಂದು ನಡೆಯಲಿದ್ದು, ಜೂ. 9ರಂದು ಪಾಕ್​ ವಿರುದ್ಧ ಹೈವೋಲ್ಟೇಜ್​ ಪಂದ್ಯ ನಡೆಯಲಿದೆ. (ಏಜೆನ್ಸೀಸ್​)

ನಾನು ಟಿ20 ವಿಶ್ವಕಪ್​ ನೋಡಲ್ಲ ಆದರೆ… ಅಚ್ಚರಿಯ ಹೇಳಿಕೆ ನೀಡಿದ ರಿಯಾನ್​ ಪರಾಗ್​!

ಗೋವಾಫೆಸ್ಟ್​-2024: ನೇಪಾಳದ ಮಾರುಕಟ್ಟೆ ಸಾಮರ್ಥ್ಯ ವಿವರಿಸಿದ ಔಟ್​ರಿಚ್​ ನೇಪಾಳ ಸಂಸ್ಥಾಪಕ ಉಜಯ ಶಖ್ಯ

Share This Article