ಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಕರ್ನಾಟಕ ಲಲಿತಕಲಾ ಅಕಾಡೆಮಿಯು ಫೆ.7ರಿಂದ 9ರವರೆಗೆ ಚಿತ್ರಕಲಾ ಶಿಬಿರ ಏರ್ಪಡಿಸಿದೆ. ಶಿಬಿರದಲ್ಲಿ ರಚನೆಯಾದ ಕಲಾಕೃತಿಗಳನ್ನು ಫೆ.12 ರಿಂದ 14ರವರೆಗೆ ಪ್ರದರ್ಶಿಸಲಾಗುವುದು.

ಚಿತ್ರಕಲಾ ಶಿಬಿರವನ್ನು ಫೆ.7ರಂದು ಬೆಳಗ್ಗೆ 11 ಗಂಟೆಗೆ ಜೆ.ಸಿ. ರಸ್ತೆಯಲ್ಲಿರುವ (ಕನ್ನಡ ಭವನ) ವರ್ಣ ಆರ್ಟ್ ಗ್ಯಾಲರಿಯಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.
ಕರ್ನಾಟಕ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಸಿ. ಚಂದ್ರಶೇಖರ್ ಮತ್ತು ಡಾ. ಎಂ.ಎಸ್. ಮೂರ್ತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ, ಜಂಟಿ ನಿರ್ದೇಶಕ ಅಶೋಕ್ ಎನ್. ಚಲವಾದಿ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ರಚನೆಯಾದ ಕಲಾಕೃತಿಗಳನ್ನು ವರ್ಣ ಆರ್ಟ್ ಗ್ಯಾಲರಿಯಲ್ಲಿ ಫೆ.12 ರಿಂದ 14 ರವರೆಗೆ ಪ್ರತಿ ದಿನ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಪ್ರದರ್ಶಿಸಲಾಗುವುದು ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.