Lemon water: ಊಟವಾದ ನಂತರ ಒಂದು ಚಮಚ ನಿಂಬೆ ರಸವನ್ನು ಕುಡಿಯಿರಿ..

Lemon Cucumber
Published on: 
Lemon water: ನಿಂಬೆಹಣ್ಣುಗಳಲ್ಲಿ ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು ಮತ್ತು ವಿವಿಧ ಪೋಷಕಾಂಶಗಳು ಸಮೃದ್ಧವಾಗಿವೆ. ಇದು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಊಟದ ನಂತರ ನಿಂಬೆ ನೀರನ್ನು ಕುಡಿಯುವುದರಿಂದ ಗ್ಯಾಸ್ಟ್ರಿಕ್ ಆಸಿಡ್ ಸಮಸ್ಯೆಯನ್ನು ಕಡಿಮೆ ಮಾಡಬಹುದು.

ಲಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್ ಕೂಡ ಸಮೃದ್ಧವಾಗಿದೆ. ಇದು ದೇಹದಲ್ಲಿನ ಆಕ್ಸಿಡೇಟಿವ್ ಹಾನಿ ಅಥವಾ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದು ನಮ್ಮನ್ನು ಆರೋಗ್ಯವಾಗಿಡಲು ಸಹ ಸಹಾಯ ಮಾಡುತ್ತದೆ.

ನಿಂಬೆ ನೀರು ಉತ್ತಮ ಡಿಟಾಕ್ಸ್ ಪಾನೀಯವಾಗಿದೆ. ಇದು ನಮ್ಮ ದೇಹದಿಂದ ವಿಷ ಮತ್ತು ಹಾನಿಕಾರಕ ಕೋಶಗಳನ್ನು ಹೊರಹಾಕುವಲ್ಲಿ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಇದು ರಕ್ತವನ್ನು ಶುದ್ಧೀಕರಿಸಲು ಸಹ ಸಹಾಯ ಮಾಡುತ್ತದೆ.

ಪ್ರತಿನಿತ್ಯ ಊಟವಾದ ನಂತರ ಉಗುರುಬೆಚ್ಚನೆಯ ನೀರಿನಲ್ಲಿ ನಿಂಬೆರಸ ಸೇರಿಸಿ ಕುಡಿದರೆ ದೇಹದಲ್ಲಿ ಸಂಗ್ರಹವಾದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇದು ಅಧಿಕ ರಕ್ತದೊತ್ತಡವನ್ನೂ ನಿಯಂತ್ರಣದಲ್ಲಿಡುತ್ತದೆ.

ಊಟದ ನಂತರ ಒಂದು ಲೋಟ ನಿಂಬೆ ರಸವನ್ನು ಕುಡಿಯುವುದರಿಂದ ನಿಮ್ಮ ಉಸಿರು ತಾಜಾವಾಗಿರುತ್ತದೆ. ನಿಂಬೆಹಣ್ಣಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದು ಹೃದಯದ ಆರೋಗ್ಯಕ್ಕೆ ಹಾಗೂ ಮೆದುಳು ಮತ್ತು ನರಗಳ ಕಾರ್ಯಕ್ಕೆ ಒಳ್ಳೆಯದು.

ಗಮನಿಸಿ: ವಿಷಯಗಳು ಮಾಹಿತಿಗಾಗಿ ಮಾತ್ರ, ನಿಮಗೆ ಯಾವುದೇ ಸಂದೇಹಗಳಿದ್ದರೆ, ತಜ್ಞರನ್ನು ಸಂಪರ್ಕಿಸಿ.