More

    ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ

    ಮಾನ್ವಿ: ಪಟ್ಟಣದ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಹಂಪಯ್ಯ ನಾಯಕ ಸೂಚಿಸಿದರು.

    ಪಟ್ಟಣದ ಶಾಸಕರ ಭವನದ ಸಭಾಂಗಣದಲ್ಲಿ ಮಾನ್ವಿ ಮತ್ತು ಸಿರವಾರ ತಾಲೂಕು ಕುಡಿಯುವ ನೀರಿನ ಟಾಸ್ಕ್ ಫೋರ್ಸ್ ಸಭೆಯಲ್ಲಿ ಸೋಮವಾರ ಮಾತನಾಡಿದರು. ಗ್ರಾಮೀಣ ಭಾಗದಲ್ಲಿನ ಕೆರೆಗಳನ್ನು ಭರ್ತಿ ಮಾಡಬೇಕು. ಕೆರೆಗಳು ಇಲ್ಲದಿದ್ದಲ್ಲಿ ಕೊಳವೆಬಾವಿಗಳನ್ನು ಹಾಕಿಸಬೇಕು. ಈಗಾಗಲೇ ಕೊಳವೆಬಾವಿಗಳಿದ್ದು, ಕಾರ್ಯನಿರ್ವಹಿಸದಿದ್ದರೆ ದುರಸ್ತಿ ಮಾಡಿಸಬೇಕೆಂದರು.

    ಪಿಡಿಒ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್‌ಗಳು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪರಿಶೀಲಿಸಿ ಅಗತ್ಯವಿದ್ದಲ್ಲಿ ದುರಸ್ತಿಗೆ ಕ್ರಮ ವಹಿಸಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಶಾಸಕ ಹಂಪಯ್ಯ ನಾಯಕ ಹೇಳಿದರು. ಪುರಸಭೆ ಮುಖ್ಯಾಧಿಕಾರಿ ಗಂಗಾಧರ, ಲೊಕೋಪಯೋಗಿ ಇಲಾಖೆ ಇಂಜಿನಿಯರ್ ರಾಜಕುಮಾರ ತೊರವಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts