ಶೀಘ್ರ ಮಹಾ ಸಿಎಂನೊಂದಿಗೆ ಎಚ್‌ಡಿಕೆ ಚರ್ಚೆ

ಅಥಣಿ: ಕೃಷ್ಣಾ ನದಿ ಬತ್ತಿರುವುದರಿಂದ ನೀರು ಬಿಡುವಂತೆ ಮಹಾ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಮಹೇಶ ಕುಮಠಳ್ಳಿ ತಿಳಿಸಿದ್ದಾರೆ.ಮಂಗಳವಾರ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಯಾವುದೇ ಕಾರಣಕ್ಕೆ ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ.

ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕುಡಿಯುವ ನೀರಿನ ಸಲುವಾಗಿ ದೂರವಾಣಿ ಮೂಲಕ ಸಂಪರ್ಕಿಸಿರುವೆ ಹೊರತು ನಾನು ಯಾವುದೇ ಪ್ರವಾಸ ಕೈಗೊಳ್ಳುತ್ತಿಲ್ಲವೆಂದು ತಿಳಿಸಿದರು.

ಈಗಾಗಲೇ ತಾಲೂಕಾಡಳಿತ ಹಾಗೂ ಜಿಲ್ಲಾಡಳಿತ ನೀರು ಬಿಡಲು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದೆ. ಸರ್ಕಾರದ ಮಟ್ಟದಲ್ಲಿ ಸಿಎಂ ಹಾಗೂ ಜಲಸಂಪನ್ಮೂಲ ಸಚಿವರು ಮಹಾ ಸರ್ಕಾರದೊಂದಿಗೆ ಮಾತುಕತೆ ನಡೆಸಲಿದ್ದಾರೆ. ಶೀಘ್ರ ಸರ್ಕಾರ ಮನವಿಗೆ ಸ್ಪಂದಿಸಿ ನೀರು ಬಿಡಲಿದೆ ಎಂದು ಭರವಸೆ ನೀಡಿದರು.