More

    ಬೆಂಗಳೂರು ಜಲಕ್ಷಾಮ; ಅನಗತ್ಯವಾಗಿ ನೀರನ್ನು ಪೋಲು ಮಾಡಿದರೆ ಬೀಳುತ್ತೆ ಭಾರೀ ದಂಡ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಲೆದೂರಿರುವ ಜಲಕ್ಷಾಮವನ್ನು ನಿಭಾಯಿಸುವ ನಿಟ್ಟಿನಲ್ಲಿ BWSSB ನಿಯಮ ಒಂದನ್ನು ಜಾರಿ ಮಾಡಿದ್ದು, ಇದನ್ನು ಪಾಲಿಸದೆ ಇದ್ದರೆ ದಂಡ ವಿಧಿಸುವ ಎಚ್ಚರಿಕೆಯನ್ನು ನೀಡಿದೆ.

    ಬೆಂಗಳೂರಿನಲ್ಲಿ ನೀರು ವ್ಯರ್ಥವಾಗುವುದನ್ನು ತಡೆಗಟ್ಟಲು ಮುಂದಾದ BWSSB, ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಿದೆ. ಕುಡಿಯುವ ನೀರನ್ನು ವಾಹನಗಳ ಸ್ವಚ್ಛತೆಗೆ, ಕಟ್ಟಡ ನಿರ್ಮಾಣ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ ಹಾಗೂ ಸಿನಿಮಾ‌ ಥಿಯೇಟರ್, ಮಾಲ್​​ಗಳಲ್ಲಿ ಬಳಸಿದರೆ ದಂಡ ವಿಧಿಸುವುದಾಗಿ ಎಚ್ಚರಿಸಿದೆ.

    ಈ ಕುರಿತು ಆದೇಶ ಹೊರಡಿಸಿರುವ BWSSB, ಬೆಂಗಳೂರು ಮಹಾನಗರದಲ್ಲಿ ಖಾಯಂ ನಿವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾತು ಒಂದು ಕೋಟಿ 40 ಲಕ್ಷ ಜನ ಸಂಖ್ಯೆಯನ್ನು ಗರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ.

    ಇದನ್ನೂ ಓದಿ: ವಿದ್ಯಾ ಚೌಡೇಶ್ವರಿ ಮಠದ ಬಾಲ ಮಂಜುನಾಥ ಬಂಧನ; ದೂರು ಕೊಟ್ಡು ಸಿಕ್ಕಿಬಿದ್ದ ಸ್ವಾಮೀಜಿ

    ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರನ್ನು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಮಿತವಾಗಿ ಬಳಸುವಂತೆ ಆದೇಶ ಹೊರಡಿಸಲಾಗಿದೆ

    ಈ ಕುರಿತು ಪ್ರತಿಕ್ರಿಯಿಸಿರುವ BWSSB ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್ ಮನೋಹರ್, ಈ ನಿಷೇದ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ರೂ. 5000/- ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ.5000/- ಜೊತೆಗೆ ಹೆಚ್ಚುವರಿಯಾಗಿ ರೂ.500/- ಪ್ರತಿದಿನದಂತೆ ದಂಡ ಹಾಕಲಾಗುವುದು.

    Water Tankers

    ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ಇಂತಹ ಘಟನೆಗಳಲ್ಲಿ ಸುಲೇಮಾನ್​ ಹೊರತು ಶಿವಪ್ಪ ಸಿಗ್ತಾನ: ಶಾಸಕ ಯತ್ನಾಳ್

    ಸಾರ್ವಜನಿಕರು ಮೇಲ್ಕಂಡ ನಿಷೇಧಗಳನ್ನು ಯಾರಾದರು ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ:1916 ಗೆ ತಿಳಿಸಬಹುದಾಗಿದೆ ಎಂದುಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ.

    ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಈ ಆದೇಶ ಹೊರಡಿಸಲಾಗಿದೆ ಎಂದು BWSSB ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts