ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ, ಅಗತ್ಯ ಕ್ರಮಕ್ಕೆ ಸೂಚನೆ

Siddaramaiah
Published on

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು. ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು.

ಈ ಸಂಬಂಧ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕಲುಷಿತ ನೀರು: ಮಾಹಿತಿ ಕೇಳಿದ ಸಿಎಂ

ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿ ಆಗಿರುವ ಹಿನ್ನೆಲೆಯಲ್ಲಿ ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net