26.8 C
Bangalore
Friday, December 13, 2019

ನಾಲ್ಕೂರಲ್ಲಿ ನೀರಿಗೆ ಹಾಹಾಕಾರ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

| ಅನಂತ ನಾಯಕ್ ಮುದ್ದೂರು ಕೊಕ್ಕರ್ಣೆ
ನಾಲ್ಕೂರು ಗ್ರಾಪಂ ವ್ಯಾಪ್ತಿಯ ಹಲವೆಡೆ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಪಂಚಾಯಿತಿ ವ್ಯಾಪ್ತಿಯ ಮಿಯಾರು, ಕಜ್ಕೆ, ಅರ್ಬಿ, ಅರಮನೆಜೆಡ್ಡು, ಮುದ್ದೂರು, ಬಾಳೆಗುಂಡಿ, ಕಜ್ಕೆ ಬೈಲು, ಮಾರಾಳಿ, ದಾಸಾನುಕಟ್ಟೆ, ಅಂಕ್ರಾಲು ಮೊದಲಾದೆಡೆ ಪಂಚಾಯಿತಿ ವತಿಯಿಂದ ಅಳವಡಿಸಲಾದ ನಳ್ಳಿಯಲ್ಲಿ ಎರಡು ಅಥವಾ ಮೂರು ದಿನಕ್ಕೊಮ್ಮೆ ನೀರು ಬರುತ್ತಿದ್ದು, ಜನರು ಕಂಗಾಲಾಗಿದ್ದಾರೆ.

ಮಿಯಾರು ಬಳಿಯ ಸೀತಾನದಿ ಹರಿವನ್ನು ನಿಲ್ಲಿಸಿದ್ದು, ನಂದಿಕೋಣ ಬಳಿ ಕಿಂಡಿ ಅಣೆಕಟ್ಟಿನಲ್ಲಿ ಶೇಖರಣೆಯಾದ ನೀರು ಗ್ರಾಮದ ಜನರ ಉಪಯೋಗಕ್ಕೆ ಬಳಸಲಾಗುತ್ತಿದೆ. ಆದರೆ ಈ ನೀರನ್ನು ಫಿಲ್ಟರ್ ಮಾಡದೆ ಕುಡಿಯುವಂತಿಲ್ಲ. ಮನೆ ಬಳಕೆಗೆ ಮಾತ್ರ ಉಪಯೋಗಿಸಬಹುದು. ಕೆಲದಿನಗಳಲ್ಲಿ ಮಳೆಯಾಗದಿದ್ದರೆ ಪರಿಸ್ಥಿತಿ ಚಿಂತಾಜನಕವಾಗಲಿದೆ.

ಸ್ಥಳೀಯ ಆಡಳಿತದಿಂದ ತಾತ್ಕಾಲಿಕ ಪರಿಹಾರ: ನೀರಿನ ಸಮಸ್ಯೆ ಅರಿತ ನಾಲ್ಕೂರು ಗ್ರಾಮ ಪಂಚಾಯಿತಿ ಈಗಾಗಲೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಿ, ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ. ಬಹುತೇಕ ಕಡೆ ನೀರಿನ ಸಮಸ್ಯೆ ಕಂಡುಬಂದಿದ್ದು, ಪೂರೈಕೆ ಸಮಸ್ಯೆಯಾಗಿ ಕಾಡುತ್ತಿದೆ.

ಎರಡು ಮೂರು ದಿನಕ್ಕೊಮ್ಮೆ ನೀರು: ಗ್ರಾಪಂ ವತಿಯಿಂದ ಹಲವು ಮಂದಿ ನಳ್ಳಿ ನೀರಿನ ಸಂಪರ್ಕ ಪಡೆದಿದ್ದರೂ ಏಪ್ರಿಲ್ ತಿಂಗಳಲ್ಲಿ ನಳ್ಳಿಯಲ್ಲಿ ನೀರು ಬರುತ್ತಿರುವುದು ಎರಡು ದಿನಕ್ಕೊಮ್ಮೆ. ಎತ್ತರದ ಪ್ರದೇಶದ ಬಹುತೇಕ ಮನೆಗಳಿಗೆ ನೀರು ಬಾರದೆ ಸಮಸ್ಯೆಯಾಗಿ ಕಾಡುತ್ತಿದೆ. ಪ್ರತಿ ಬಾರಿಗಿಂತ ಈ ಬಾರಿ ಬಹುಬೇಗನೆ ಜಲಮೂಲ ಸಂಪೂರ್ಣ ಬತ್ತಿದ ಪರಿಣಾಮ ನೀರಿಗಾಗಿ ಹಾಹಕಾರ ಎದ್ದಿದೆ. ನೀರಿನ ಸಮಸ್ಯೆಗಾಗಿ ತಾತ್ಕಾಲಿಕ ಪರಿಹಾರ ನೀಡುವ ಪ್ರಯತ್ನ ಮಾಡುತ್ತಿದ್ದರೂ ನೀರಿನ ಸಮಸ್ಯೆ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಪ್ರತಿದಿನ 300 ಲೀಟರ್ ನೀರನ್ನು ಪ್ರತಿ ಮನೆಗೆ ಪಂಚಾಯಿತಿ ವತಿಯಿಂದ ಟ್ಯಾಂಕರ್ ಮೂಲಕ ಪೂರೈಸಲಾಗುತ್ತಿದೆ. ಸ್ಥಳೀಯರೋರ್ವರು ಕುಡಿಯುವ ನೀರಿನ ಬೋರ್ ತೆರೆದಿದ್ದು, ಸದ್ಯೆಕ್ಕೆ ಅದರ ನೀರನ್ನು ಕುಡಿಯಲು ಬಳಸಲಾಗುತ್ತಿದೆ. ಬೆಳಗ್ಗೆ 6.30ರಿಂದ ರಾತ್ರಿ 11.30ರ ವರೆಗೆ ಟ್ಯಾಂಕರ್‌ನಲ್ಲಿ ನೀರು ಪ್ರತಿ ಮನೆಗೂ ಸರಬರಾಜಾಗುತ್ತಿದೆ. ನೀರಿನ ಸಮಸ್ಯೆ ಕುರಿತು ಜಿಪಂ ಸದಸ್ಯರ ಗಮನಕ್ಕೆ ತರಲಾಗುವುದು.
|ಪ್ರಭಾಕರ ಎ.,ಉಪಾಧ್ಯಕ್ಷರು ನಾಲ್ಕೂರು ಗ್ರಾಪಂ

ಗ್ರಾಪಂ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಮನೆಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜಾಗುತ್ತಿದೆ. ಕಿಂಡಿ ಅಣೆಕಟ್ಟಿನಲ್ಲಿ ಶೇಖರಣೆಯಾದ ನೀರು ಕುಡಿಯಲು ಫಿಲ್ಟರ್ ಮಾಡಬೇಕು. ಆದರೆ ಇದಕ್ಕೆ ಸೂಕ್ತ ವ್ಯವಸ್ಥೆ ಮಾಡಿದರೆ ಬಹುತೇಕ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾದೀತು. ಗ್ರಾಮದಲ್ಲಿ ಹೆಚ್ಚಿನ ಮನೆಗಳಲ್ಲಿ ಬಾವಿಯಿದ್ದು, ನೀರು ತಳ ಮಟ್ಟದಲ್ಲಿದೆ.
|ಸಂತೋಷ್ ಹೆಗ್ಡೆ ಮಾರಾಳಿ, ಸದಸ್ಯರು ನಾಲ್ಕೂರು ಗ್ರಾಪಂ05

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....