25.9 C
Bengaluru
Wednesday, January 22, 2020

ಸೌಲಭ್ಯವಂಚಿತ ಕಳಿಹಿತ್ಲುನಲ್ಲಿ ಕುಡಿಯುವ ನೀರಿಗೂ ಬರ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಶಿರೂರು: ಅಭಿವೃದ್ದಿ ಹೊಂದುತ್ತಿರುವ ಶಿರೂರು ಗ್ರಾಮದ ಒಂದು ಪಾರ್ಶ್ವದಲ್ಲಿರುವ ಕಳಿಹಿತ್ಲು ಪ್ರದೇಶ ಮೂಲಸೌಕರ್ಯ ವಂಚಿತವಾಗಿ ದ್ವೀಪದಂತಾಗಿದೆ. ಈ ಊರಿನ ಅನತಿ ದೂರದಲ್ಲಿ ಅಭಿವೃದ್ಧಿ ಸಾಧಿಸಿದ ಸಾಕಷ್ಟು ಪ್ರದೇಶಗಳಿದ್ದರೂ ಕಳಿಹಿತ್ಲು ಮಾತ್ರ ಇಂದಿಗೂ ಹಲವು ಸೌಲಭ್ಯಗಳಿಂದ ವಂಚಿತವಾಗಿ ಉಳಿದುಬಿಟ್ಟಿದೆ.

ಕಳಿಹಿತ್ಲು ಶಿರೂರು ಗ್ರಾಮದ ಕಡಲ ತಡಿಯ ಹಡವಿನಕೋಣೆ ಹಾಗೂ ಕೇರಿ ರಸ್ತೆಯ ನಡುವೆ ಇದೆ. ಸುಮಾರು 100ಕ್ಕೂ ಅಧಿಕ ಮನೆಗಳಿವೆ. ಒಕ್ಕಲು ಮಸೂದೆ ಕಾಯ್ದೆಯಿಂದ ಕೆಲವರಿಗೆ ಜಾಗ ಮಂಜೂರಾದರೆ ಇನ್ನು ಕೆಲವರು ತಲೆತಲಾಂತರಗಳಿಂದ ಒಡೆಯರ ಜಾಗದಲ್ಲಿ ವಾಸಿಸುತ್ತಿದ್ದಾರೆ. 94/ಸಿ ಕೂಡ ಕೆಲವರಿಗೆ ಮಂಜೂರಾತಿ ಆಗಿಲ್ಲ. ಕಳಿಹಿತ್ಲು ಬಂದರಿಗೆ ಹೋಗುವ ರಸ್ತೆ ಬಿಟ್ಟರೆ ಊರಿನ ಒಳಭಾಗಕ್ಕೆ ಬರಲೂ ರಸ್ತೆಗಳಿಲ್ಲ. ಸುತ್ತ ಖಾಸಗಿ ಜಾಗ ಇದ್ದು ರಸ್ತೆಗಾಗಿ ಜಾಗ ಬಿಡುವ ಔದಾರ್ಯತೆ ಯಾರಿಗೂ ಇಲ್ಲ.

ವರ್ಷಪೂರ್ತಿ ಉಪ್ಪು ನೀರು ಆವರಿಸಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ನಿತ್ಯ ಯಾತನೆಯಾಗಿದೆ. ಸ್ಥಳೀಯರ ಸಹಕಾರದಿಂದ ಈ ಭಾಗದ ಏಕೈಕ ಹಿರಿಯ ಪ್ರಾಥಮಿಕ ಶಾಲೆ ಒಂದಿಷ್ಟು ಅಭಿವೃದ್ಧಿ ಕಂಡಿದೆ. ಇನ್ನುಳಿದಂತೆ ನದಿಯ ಪಕ್ಕದಲ್ಲಿರುವ ಮನೆಯವರು ಒಂದು ಕೊಡ ನೀರಿಗಾಗಿ ಕಿ.ಮೀ ದೂರ ನಡೆಯಬೇಕಿದೆ. ಕಾಲುದಾರಿ ಹೊರತುಪಡಿಸಿದರೆ ಸಮರ್ಪಕ ರಸ್ತೆ ಇದುವರೆಗೆ ಕಂಡಿಲ್ಲ. ಈ ಬಗ್ಗೆ ಮನವಿ ನೀಡಿದರು ಕೂಡ ಚುನಾಯಿತ ಪ್ರತಿನಿಧಿಗಳು ಗಮನ ಹರಿಸಿಲ್ಲ.

ಕಳಿಹಿತ್ಲು ಕಳೆದ ಹಲವು ವರ್ಷಗಳಿಂದ ಮೂಲ ಸೌಲಭ್ಯದ ಕೊರತೆಯಿಂದ ನಲುಗುತ್ತಿದೆ. ಕನಿಷ್ಟ ಪಕ್ಷ ಇಲ್ಲಿನ ಜನರಿಗೆ ರಸ್ತೆ ಕೂಡ ಇಲ್ಲವಾದುದರಿಂದ ಮಳೆಗಾಲದಲ್ಲಿ ವಾಹನ ಬಿಟ್ಟು ನಡೆದುಕೊಂಡು ಬರಬೇಕಾಗಿದೆ. ಈ ಕುರಿತು ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಗಮನ ಹರಿಸಬೇಕಾಗಿದೆ.

ವಸಂತ ಮೊಗೇರ ಕಳುಹಿತ್ಲು ನಿವಾಸಿ

ಶಿರೂರು ಕಳಿಹಿತ್ಲು ಭಾಗದ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಸಮರ್ಪಕ ರಸ್ತೆ, ಉಪ್ಪು ನೀರು ತಡೆಗೋಡೆ ನಿರ್ಮಾಣ ಹಾಗೂ ಕುಡಿಯುವ ನೀರಿನ ಸಮಸ್ಯೆ ಹಂತಹಂತವಾಗಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಬೈಂದೂರು ಕ್ಷೇತ್ರವನ್ನು ಮಾದರಿಯನ್ನಾಗಿಸುವುದು ನನ್ನ ಕನಸು.

ಬಿ.ಎಂ.ಸುಕುಮಾರ ಶೆಟ್ಟಿ ಶಾಸಕರು ಬೈಂದೂರು

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...