More

    ಕುಡಿವ ನೀರಿಗೆ ತೊಂದರೆ ಆಗದಿರಲಿ ಎಂದು ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷ ಎಚ್.ವಿಶ್ವನಾಥರಡ್ಡಿ ಸೂಚನೆ

    ಯಲಬುರ್ಗಾ: ತಾಲೂಕಿನ ಪ್ರತಿಯೊಂದು ಹಳ್ಳಿಯ ಜನತೆಗೆ ಕುಡಿವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕಾಳಜಿ ವಹಿಸಬೇಕು ಎಂದು ಜಿಪಂ ಅಧ್ಯಕ್ಷ ಎಚ್.ವಿಶ್ವನಾಥರಡ್ಡಿ ಹೇಳಿದರು.

    ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಕುಡಿವ ನೀರಿನ ಸಮಸ್ಯೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಲಬುರ್ಗಾ ಮತ್ತು ಕುಕನೂರು ತಾಲೂಕಿನ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಶುದ್ಧ ಕುಡಿವ ನೀರಿನ ಘಟಕ ಸ್ಥಗಿತಗೊಳ್ಳದಂತೆ ನೋಡಿಕೊಳ್ಳಬೇಕು. ನೀರಿನ ಸಮಸ್ಯೆ ಕಂಡು ಬಂದರೆ ತಕ್ಷಣವೇ ಸ್ಥಳಕ್ಕೆ ತೆರಳಿ ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಬೇಜವಾಬ್ದಾರಿ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ರಾಜ್ಯ ಸರ್ಕಾರ ಕಲಬುರ್ಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಿಗೆ ಎಸ್‌ಪಿ ಟೆಎಸ್‌ಪಿ ಯೋಜನೆಯಡಿ ಸುಮಾರು 45 ಕೋಟಿ ರೂ. ಅನುದಾನ ಮಂಜೂರಾಗಿದೆ. ಕೊಪ್ಪಳ ಜಿಲ್ಲೆಗೆ 29 ಕೋಟಿ ರೂ. ಮೀಸಲಿರಿಸಿದೆ. ನೀರಿನ ಸಮಸ್ಯೆ ನೀಗಿಸಲು ಅನುದಾನ ಕೊರತೆ ಇಲ್ಲ. ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

    ಜಿಲ್ಲಾದ್ಯಂತ ಕರೊನಾ ತಡೆಗಟ್ಟುವಲ್ಲಿ ಉತ್ತಮ ಕ್ರಮ ಕೈಗೊಂಡಿದೆ. ಅಲ್ಲದೇ ಈ ತಾಲೂಕಿನಲ್ಲಿ ಎಲ್ಲಾ ಅಧಿಕಾರಿಗಳು ಕೊವಿಡ್-19 ವೈರಸ್ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜತೆಗೆ ನಿರ್ಮೂಲನೆಗೆ ಶ್ರಮಿಸಬೇಕು ಎಂದರು. ತಾಪಂ ಇಒ ಡಾ.ಜಯರಾಮ ಚವಾಣ್, ತಹಸೀಲ್ದಾರ್ ಶ್ರೀಶೈಲ ತಳವಾರ್, ಸಿಪಿಐ ಎಂ.ನಾಗರಡ್ಡಿ, ಟಿಎಚ್‌ಒ ಮಂಜುನಾಥ ಬ್ಯಾಲಹುಣಸಿ, ಜಿಪಂ ಎಇಇ ಶಿವಕುಮಾರ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts