More

    ಕುಡಿಯುವ ನೀರಿಗಾಗಿ ಪ್ರತಿಭಟನೆ

    ಉಳ್ಳಾಗಡ್ಡಿ-ಖಾನಾಪುರ: ಕುಡಿಯುವ ನೀರಿಗಾಗಿ ಆಗ್ರಹಿಸಿ ಗುರುವಾರ ಪಾಶ್ಚಾಪುರ ಗ್ರಾಪಂ ಕಚೇರಿಗೆ ಬೀಗ ಜಡಿದು ಖಾಲಿ ಕೊಡಗಳನ್ನು ಹಿಡಿದುಕೊಂಡು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

    ಪಾಶ್ಚಾಪುರ ಗ್ರಾಮದಲ್ಲಿ 8 ರಿಂದ 9 ದಿನಕ್ಕೊಮ್ಮೆ ನೀರು ಸರಬರಾಜು ಆಗುತ್ತಿರುವುದರಿಂದ ಜನರು ಕುಡಿಯುವ ನೀರಿಗಾಗಿ ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕುರಿತು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮೇಲಿಂದ ಮೇಲೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಜನರ ಸಮಸ್ಯೆಗಳಿಗೆ ಗ್ರಾಪಂ ಆಡಳಿತ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ದೂರಿದರು.

    ಪ್ರತಿ ವರ್ಷ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಿಕೊಂಡು ಬರುತ್ತಿದ್ದಾರೆ. ಆದರೆ ಇಲ್ಲಿಯವರೆಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಯೋಜನೆ ರೂಪಿಸಿಲ್ಲ. ಕೊಳವೆ ಬಾವಿ ಕೊರೆಯಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಯಾವುದೇ ರೀತಿಯಲ್ಲಿ ಕ್ರಮ ವಹಿಸಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

    ಬಸವಣ್ಣಿ ಅಂಬಿಗೇರ, ಜಾಕೀರ ಹುಸೇನ್, ನಬಿಸಾಬ ಲಂಗೋಟಿ, ದಸ್ತಗೀರ ಪಾಟೀಲ, ಗಣಪತಿ ಕಾಕಡೆ, ಮಹೇಶ ಹೂಗಾರ, ಸಿದ್ದಪ್ಪ ಸಿಡ್ಲಿಹಾಳ, ಅಮೀನಾ ಮುಜಾವರ, ಭೀಬವ್ವ ಸಿಡ್ಲಿಹಾಳ ಮತ್ತಿತರರು ಉಪಸ್ಥಿತರಿದ್ದರು.

    ಗ್ರಾಮದಲ್ಲಿ 7 ವಾರ್ಡಗಳಿದ್ದು ಮುಂದಿನ 10 ದಿನಗಳಲ್ಲಿ ಕೊಳವೆಬಾವಿ ಕೊರೆಸುವ ವ್ಯವಸ್ಥೆ ಮಾಡಲಾಗುವುದು. ಟ್ಯಾಂಕ್‌ರ್ ಮೂಲಕ ನೀರು ಪೂರೈಕೆ ಮಾಡಲಾಗುವುದು.
    | ಮಂಜುನಾಥ ಪಾಟೀಲ, ಜಿಪಂ ಸದಸ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts