More

    ಕುಡಿವ ನೀರು ಪೂರೈಕೆ ಸಮರ್ಪಕವಾಗಿರಲಿ, ಡಿಸಿ ಎಂ.ಸುಂದರೇಶ ಬಾಬು ಸೂಚನೆ

    ಕೊಪ್ಪಳ: ಮಳೆ ಹಾನಿಗೆ ಪರಿಹಾರ ಒದಗಿಸಿ. ಮಳೆ ಕೊರತೆಯಾದಲ್ಲಿ ಸಮರ್ಪಕ ಕುಡಿವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅಧಿಕಾರಿಗಳಿಗೆ ಸೂಚಿಸಿದರು.

    ಇದನ್ನೂ ಓದಿ: ಪ್ರತಿಯೊಬ್ಬರಿಗೂ ಶುದ್ಧ ಕುಡಿವ ನೀರು ಪೂರೈಸಿ

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ನಗರ, ಗ್ರಾಮೀಣ ಭಾಗದಲ್ಲಿ ಕುಡಿವ ನೀರಿನ ಕೊರತೆಯಾಗದಿರಲಿ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ನಿಗಾವಹಿಸಿ. ಮಳೆಯಿಂದ ಹಾನಿ ಸಂಭವಿಸಿದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯಕ್ರಮ ಕೈಗೊಳ್ಳಿ. ತಕ್ಷಣ ಪರಿಹಾರ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ನೀರು ಪರೀಕ್ಷಿಸಿದ ಬಳಿಕವೇ ಪೂರೈಸಿ. ಬೋರ್‌ವೆಲ್ ಸೇರಿ ಯಾವುದೇ ನೀರಿನ ಮೂಲವಿದ್ದರೂ ಕಾಲ ಕಾಲಕ್ಕೆ ಪರೀಕ್ಷಿಸಿ. ಮಳೆ ಹಿನ್ನೆಲೆಯಲ್ಲಿ ಅಲ್ಲಲ್ಲಿ ನೀರು ಸಂಗ್ರಹಗೊಂಡು ಸೊಳ್ಳೆಗಳು ಉತ್ಪತ್ತಿ ಹೆಚ್ಚಾಗುತ್ತದೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸಿ. ಜಾಗೃತಿ ಕ್ರಮ ಕೈಗೊಳ್ಳಿ. ಜನರು ಕುದಿಸಿ ಆರಿಸಿದ ನೀರು ಸೇವಿಸಬೇಕು. ಮನೆ ಸುತ್ತಲ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವಂತೆ ಅರಿವು ಮೂಡಿಸಬೇಕೆಂದು ತಿಳಿಸಿದರು.

    ಎಡಿಸಿ ಸಾವಿತ್ರಿ ಕಡಿ ಮಳೆಹಾನಿ ಪ್ರಕರಣಗಳಲ್ಲಿ ಪರಿಹಾರ ವಿತರಿಸಿದ ಬಗ್ಗೆ ಮಾಹಿತಿ ನೀಡಿದರು. ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಮಾತನಾಡಿ, ಜಿಲ್ಲೆಯಲ್ಲಿ ಜು.1ರಿಂದ 12ರವರೆಗೆ ಎಲ್ಲ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. 18 ಮಿ.ಮೀ. ವಾಡಿಕೆ ಮಳೆ ಪೈಕಿ 33 ಮಿ.ಮೀ.ನಷ್ಟಾಗಿದೆ. ಶೇ.84ರಷ್ಟು ಹೆಚ್ಚುವರಿ ಮಳೆ ಬಂದಿದೆ ಎಂದರು.

    ಸಹಾಯಕ ಆಯುಕ್ತ ಮಹೇಶ ಮಾಲಗಿತ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯಾರಾಣಿ ಕೆ.ವಿ., ಡಿಎಚ್‌ಒ ಡಾ.ಟಿ.ಲಿಂಗರಾಜು, ತಹಸೀಲ್ದಾರ್‌ಗಳು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಇತರ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts