More

    ಜಿಲ್ಲಾದ್ಯಂತ ಪೋಲಿಯೋ ಅಭಿಯಾನಕ್ಕೆ ಚಾಲನೆ

    ಗದಗ: ಜಿಲ್ಲಾದ್ಯಂತ ಜ. 31ರಿಂದ ಫೆ. 3ರವರೆಗೆ ಮೊದಲನೇ ಸುತ್ತಿನ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಲಸಿಕಾ ಅಭಿಯಾನದಲ್ಲಿ ಜಿಲ್ಲೆಯ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಸುಂದರೇಶಬಾಬು ಹೇಳಿದರು.

    ನಗರದ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಮಗುವಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿದರು.

    ಜಿಲ್ಲೆಯಲ್ಲಿ ಐದು ವರ್ಷದೊಳಗಿನ 1,30,666 ಮಕ್ಕಳಿದ್ದಾರೆ. 705 ಬೂತ್​ಗಳನ್ನು ಸ್ಥಾಪಿಸಲಾಗಿದೆ. ಲಸಿಕಾ ಕಾರ್ಯಕ್ರಮಕ್ಕೆ 146 ಮೇಲ್ವಿಚಾರಕರನ್ನು ನೇಮಿಸಲಾಗಿದ್ದು, 10 ಮೊಬೈಲ್ ಲಸಿಕಾ ತಂಡ ರಚಿಸಲಾಗಿದೆ. ವಲಸೆ ಕಾರ್ವಿುಕರ ಮಕ್ಕಳು, ಕೊಳಗೇರಿ ಮಕ್ಕಳು ಸೇರಿದಂತೆ ಯಾವ ಮಕ್ಕಳೂ ಲಸಿಕೆಯಿಂದ ವಂಚಿತರಾಗಬಾರದು ಎಂದರು. ಕಾರ್ಯಕ್ರಮಕ್ಕೆ ಪತ್ನಿ ಸಮೇತ ಬಂದಿದ್ದ ಜಿಲ್ಲಾಧಿಕಾರಿ ಸುಂದರೇಶಬಾಬು ತಮ್ಮ ಮಗುವಿಗೆ ಪೋಲಿಯೋ ಲಸಿಕೆ ಹಾಕಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರೀಗಿಡದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಜಿ.ಎಸ್. ಪಲ್ಲೇದ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ವೈ.ಕೆ. ಭಜಂತ್ರಿ, ಡಾ. ಅರುಂಧತಿ ಕುಲಕರ್ಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಉಸ್ಮಾನ್ ಎ., ನಗರಸಭೆ ಪೌರಾಯುಕ್ತ ರಮೇಶ ಜಾಧವ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts