More

    ಮತದಾರರ ಜಾಗೃತಿ ವಾಹನಕ್ಕೆ ಚಾಲನೆ

    ಸಾಗರ: ಮತದಾನ ಪ್ರಮಾಣ ಹೆಚ್ಚಿಸುವ ಹಾಗೂ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಸೈಯದ್ ಕಲೀಮುಲ್ಲಾ ಹೇಳಿದರು.

    ತಾಪಂ ಆವರಣದಲ್ಲಿ ಶನಿವಾರ ಜಿಲ್ಲಾ ಮತ್ತು ತಾಲೂಕು ಸ್ವೀಪ್ ಸಮಿತಿಯಿಂದ ಮತದಾರರ ಜಾಗೃತಿ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
    ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾಲೂಕಿನ 32 ಮತಗಟ್ಟೆಯಲ್ಲಿ ಅತೀ ಕಡಿಮೆ ಮತದಾನವಾಗಿದೆ. ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿರುವ ಈ ಮತಗಟ್ಟೆಗಳನ್ನು ಕೇಂದ್ರವಾಗಿರಿಸಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಲಾಗಿದೆ. 32 ಮತಗಟ್ಟೆಗಳಲ್ಲಿ ನನ್ನನ್ನು ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಮತದಾರರನ್ನು ವೈಯಕ್ತಿಕವಾಗಿ ಭೇಟಿಯಾಗಿ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಮನವೊಲಿಸುವ ಪ್ರಯತ್ನ ನಡೆಸಲಾಗುವುದು ಎಂದರು.
    ಶೇ.100 ಮತದಾನ ನಮ್ಮ ತಾಲೂಕಿನಲ್ಲಿ ಆಗಬೇಕೆಂಬ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಮೇ 7ರಂದು ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.
    ತಾಪಂ ಇಒ ಸುನಿತಾ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್.ಕೆ.ನಾಗಪ್ಪ, ಮಹ್ಮದ ಹನೀಫ್, ಸಚಿನ್, ವೆಂಕಟೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts