ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ

ಮೈಸೂರು: ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರಿಗೆ ನೆರವಾಗಲು ಸಂಯುಕ್ತ ಕರ್ನಾಟಕ ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಮಂಗಳವಾರ ಚಾಲನೆ ದೊರೆಯಿತು.

ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಿ.ಕೆ.ಮಹೇಂದ್ರ ದೇಣಿಗೆ ಸಂಗ್ರಹಕ್ಕೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಚಾಲನೆ ನೀಡಿದರು.

ಈ ಸಂದರ್ಭ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು, ಆಟೋ ಚಾಲಕರ ಸಂಘದ ಅಧ್ಯಕ್ಷ ಶ್ರೀನಿವಾಸ್ ಮಿತ್ರ, ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಇತರರು ಇದ್ದರು.