More

    ನೇತ್ರ ಕಣ್ಣಿ ತಪಾಸಣಾ ಶಿಬಿರಕ್ಕೆ ಚಾಲನೆ

    ಕೊಳ್ಳೇಗಾಲ: ಪಟ್ಟಣದ ವಿಶ್ವಚೇತನ ಕಾಲೇಜಿನಲ್ಲಿ ಎಚ್.ಕೆ.ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್, ರೋಟರಿ ಕ್ಲಬ್ ಮತ್ತು ರೋಟರಿ ಮಿಡ್- ಟೌನ್ ಹಾಗೂ ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಭಾನುವಾರ ನೇತ್ರ ನಿರಂತರ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

    ಎಚ್.ಕೆ.ಟ್ರಸ್ಟ್‌ನ ಸಂಸ್ಧಾಪಕ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ಶಿಬಿರ ಉದ್ಘಾಟಿಸಿದರು. ನಗರಸಭಾ ಸದಸ್ಯ ಮಾಜಿ ಸದಸ್ಯ ಜೆ.ಹರ್ಷ ಮಾತನಾಡಿ, ದಿ.ಎಚ್.ಕೃಷ್ಣಸ್ವಾಮಿ ಅವರು ಈ ಹಿಂದೆ ಮಾಡುತ್ತಿದ್ದ ಸಮಾಜಮುಖಿ ಕಾರ್ಯಗಳನ್ನು ಅವರ ಕುಟುಂಬ ಎಚ್.ಕೃಷ್ಣಸ್ವಾಮಿ ಮೆಮೋರಿಯಲ್ ಟ್ರಸ್ಟ್ ಸ್ಥಾಪಿಸುವ ಮೂಲಕ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಎಚ್.ಕೃಷ್ಣಸ್ವಾಮಿ ಅವರ ಪತ್ನಿ ಪ್ರೇಮಲತಾ ಕೃಷ್ಣಸ್ವಾಮಿ ಹಾಗೂ ಅವರ ಕುಟುಂಬ ವರ್ಗದವರು ಆರೋಗ್ಯ ಸೇವೆಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಕೂಲಿ ಕಾರ್ಮಿಕರು, ಕೃಷಿಕರು, ಬಡವರು ಹಾಗೂ ಹಿಂದುಳಿದ ವರ್ಗದವರಿಗಾಗಿ ಪ್ರತಿ ತಿಂಗಳು ಎರಡನೇ ಭಾನುವಾರ ನಡೆಯುವ ನೇತ್ರ ನಿರಂತರ ಹೆಸರಲ್ಲಿ ಕಣ್ಣಿನ ಉಚಿತ ಚಿಕಿತ್ಸಾ ಸೇವೆ ಒದಗಿಸುತ್ತಿದ್ದಾರೆ ಎಂದರು.

    ಈ ಶಿಬಿರದಲ್ಲಿ 123 ರೋಗಿಗಳು ತಪಾಸಣೆಗೆ ಒಳಪಟ್ಟಿದ್ದು ಅದರಲ್ಲಿ 53 ಜನರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆಗಾಗಿ ಅರವಿಂದ ಕಣ್ಣಿನ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

    ರೋಟರಿ ಮಿಡ್ ಟೌನ್ ಸಂಸ್ಥೆಯ ಅಧ್ಯಕ್ಷ ದಕ್ಷಿಣ ಮೂರ್ತಿ, ರೋಟರಿ ಸಂಸ್ಥೆಯ ಕಾರ್ಯದರ್ಶಿ ಪ್ರಸನ್ನಕುಮಾರ್, ಅರವಿಂದ ಕಣ್ಣಿನ ಆಸ್ಪತ್ರೆಯ ಡಾ.ಪದ್ಮಾಪ್ರಿಯಾ, ಡಾ.ಫೆಲೋನಿ ಸನ್ನಿ, ಅರವಿಂದ ಕಣ್ಣಿನ ಆಸ್ಪತ್ರೆಯ ಸಂಯೋಜಕ ವಿಜಯ್‌ಕುಮಾರ್, ರವೀಂದ್ರ ನಿರ್ಮಲಾ, ಚೇತನ್‌ರಾಜ್, ಅರುಣ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts