More

    ಸಂಚಾರಿ ವಿಜ್ಞಾನ ಪ್ರಯೋಗಾಲಯಕ್ಕೆ ಚಾಲನೆ

    ನವಲಗುಂದ: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆ ವತಿಯಿಂದ ಶಾಲಾ ಶಿಕ್ಷಣ ಕಾರ್ಯಕ್ರಮದಡಿ ನಡೆಯುವ ಸಂಚಾರಿ ವಿಜ್ಞಾನ ಪ್ರಯೋಗಾಲಯಕ್ಕೆ ತಾಲೂಕಿನ ತಿರ್ಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಯಿತು.

    ಚಾಲನೆ ನೀಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ ಮಾತನಾಡಿ, ವಿಜ್ಞಾನ ಪ್ರಯೋಗಾಲಯದಿಂದ ಮಕ್ಕಳ ಕಲಿಕೆಗೆ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

    ಶಾಲಾ ಶಿಕ್ಷಣ ಕಾರ್ಯಕ್ರಮದ ವ್ಯವಸ್ಥಾಪಕ ಸಂತೋಷಕುಮಾರ ಮಾತನಾಡಿ, ಈ ಮೊದಲು ಧಾರವಾಡ ಮತ್ತು ಕಲಘಟಗಿ ತಾಲೂಕಿನಲ್ಲಿ ಸಂಚರಿಸಿದ್ದ ಸಂಚಾರಿ ವಿಜ್ಞಾನ ಪ್ರಯೋಗಾಲಯ ಇನ್ನು ಮುಂದೆ ನವಲಗುಂದ ತಾಲೂಕಿನಲ್ಲಿ ಸಂಚಾರ ಮಾಡಲಿದೆ. ಪ್ರಯೋಗಗಳ ಮೂಲಕ ವಿಷಯವನ್ನು ಮನದಟ್ಟು ಮಾಡುವುದು ಮತ್ತು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಇದರ ಉದ್ದೇಶವಾಗಿದೆ. ಸಂಚಾರಿ ವಿಜ್ಞಾನ ಪ್ರಯೋಗಾಲಯ ವರ್ಷದಲ್ಲಿ ಒಂದು ಶಾಲೆಗೆ ಆರು ಬಾರಿ ಭೇಟಿ ನೀಡುತ್ತದೆ ಎಂದು ತಿಳಿಸಿದರು.

    ಮುಖ್ಯಶಿಕ್ಷಕ ಬಿ.ಎಫ್. ಅರವಟಗಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಿನ್ನಪ್ಪಣ್ಣ ಸಂಶಿ, ಸುರೇಶ, ಕವಳಿ, ಸುಬಾನಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts