More

  ವೇಗದೂತ ಬಸ್‌ಗಳ ನಿಲುಗಡೆಗೆ ಚಾಲನೆ

  ಮಳವಳ್ಳಿ: ತಾಲೂಕಿನ ಪಂಡಿತಹಳ್ಳಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ವೇಗದೂತ ಬಸ್‌ಗಳ ಕೋರಿಕೆ ನಿಲುಗಡೆಗೆ ಮಳವಳ್ಳಿ ಡಿಪೊ ಮ್ಯಾನೇಜರ್ ದಯಾನಂದ ಮಂಗಳವಾರ ಚಾಲನೆ ನೀಡಿದರು.

  ಡಿಪೊ ಮ್ಯಾನೇಜರ್ ದಯಾನಂದ ಮಾತನಾಡಿ, ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆಯಂತೆ ನಿಗಮ ವೇಗದೂತ ಬಸ್‌ಗಳ ನಿಲುಗಡೆಗೆ ಅದೇಶ ನೀಡಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

  ಗ್ರಾಪಂ ಮಾಜಿ ಸದಸ್ಯ ಸದಸ್ಯ ಶಿವು ಮಾತನಾಡಿ, ನಮ್ಮ ಗ್ರಾಮ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವುದರಿಂದ ಗ್ರಾಮೀಣ ಸಾರಿಗೆ ಬಸ್‌ಗಳನ್ನು ಹೊರತುಪಡಿಸಿ ಇಲ್ಲಿ ಸಂಸ್ಥೆಯ ವೇಗದೂತ ಬಸ್‌ಗಳು ನಿಲುಗಡೆ ಮಾಡುತ್ತಿರಲಿಲ್ಲ. ಇದರಿಂದ ಸುತ್ತಮುತ್ತಲ ಗ್ರಾಮಗಳ ಸಾರ್ವಜನಿಕರಿಗೆ ಹಾಗೂ ಈ ಭಾಗದ ನೂರಾರು ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲಾ-ಕಾಲೇಜು ಮತ್ತು ಇತರೆಡೆಗೆ ತೆರಳಲು ತೊಂದರೆಯಾಗುತ್ತಿತ್ತು. ಈ ವಿಚಾರವಾಗಿ ಹಲವು ಬಾರಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿರಲಿಲ್ಲ. ಇತ್ತೀಚೆಗೆ ಗ್ರಾಮದ ಮುಖಂಡರ ಜತೆಗೂಡಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಇಲ್ಲಿನ ಸಮಸ್ಯೆಯ ಬಗ್ಗೆ ವಿವರಿಸಿದ್ದ ಹಿನ್ನೆಲೆಯಲ್ಲಿ ನಮ್ಮ ಮನವಿಗೆ ಪೂರಕವಾಗಿ ಸ್ಪಂದಿಸಿದ್ದ ಸಚಿವರು ಬಸ್ ನಿಲುಗಡಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಸ್ಥಳದಲ್ಲೇ ಆದೇಶ ಹೊರಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.
  ಮೊದಲು ನಿಲುಗಡೆಗೊಂಡ ವೇಗದೂತ ಸಾರಿಗೆ ಬಸ್‌ಗೆ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಪೂಜೆ ಸಲ್ಲಿಸಿ ನಂತರ ನೆರೆದಿದ್ದ ಜನರಿಗೆ ಸಿಹಿ ಹಂಚುವ ಮೂಲಕ ಚಾಲನೆ ನೀಡದಲಾಯಿತು.

  ರಾಜ್ಯೋತ್ಸವ ರಸಪ್ರಶ್ನೆ - 24

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts