More

    ಮತದಾನ ಹೆಚ್ಚಿಸಲು ಜಾಗೃತಿ ಮೂಡಿಸಿ

    ಬಸವಕಲ್ಯಾಣ: ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕಾಗಿದೆ. ಕಳೆದ ಚುನಾವಣೆಗಿಂತ ಈ ಸಲ ಹೆಚ್ಚಿನ ಮತದಾನ ಆಗಬೇಕು. ಅದಕ್ಕಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ತುಂಬಾ ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರಡ್ಡಿ ಹೇಳಿದರು.

    ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಆಡಳಿತ ವತಿಯಿಂದ ಗುರುವಾರ ರಥ ಮೈದಾನದಲ್ಲಿ ಹಮ್ಮಿಕೊಂಡಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಬಲಗೊಳಿಸಲು ಕಡ್ಡಾಯ ಮತ ಚಲಾಯಿಸುವುದು ಅವಶ್ಯ. ಮೇ ೭ರಂದು ಎಲ್ಲರೂ ಮತದಾನ ಮಾಡುವುದರ ಜತೆಗೆ ನಿಮ್ಮ ಮನೆ, ಪಕ್ಕದವರಿಗೆ ಮತ್ತು ಬಡಾವಣೆಗಳಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.

    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಮತದಾನದ ಬಗ್ಗೆ ಹೆಚ್ಚೆಚ್ಚು ಪ್ರಚಾರ ಮಾಡಬೇಕು. ನಮ್ಮ ಜಿಲ್ಲೆಯಿಂದ ವಲಸೆ ಹೋದ ಮತದಾರರಿಗೆ ಮುಂಚಿತವಾಗಿ ತಿಳಿಸಿ ಅವರನ್ನು ಮತದಾನದಂದು ಗ್ರಾಮಕ್ಕೆ ಬಂದು ಮತ ಚಲಾಯಿಸಲು ತಿಳಿಸಬೇಕು ಎಂದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಮಾತನಾಡಿ, ಭಾರತ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಇದನ್ನು ಮತ್ತಷ್ಟು ಗಟ್ಟಿಗೊಳಿಸಲು ಎಲ್ಲ ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಧೈರ್ಯದಿಂದ ನಿಮ್ಮ ಮತದಾನದ ಹಕ್ಕು ಚಲಾಯಿಸಬೇಕು ಎಂದರು.

    ಸಹಾಯಕ ಆಯುಕ್ತ ಅನೀಲಕುಮಾರ ಡವಳಗಿ, ತಹಸೀಲ್ದಾರ್ ಶಾಂತಗೌಡ ಬಿರಾದಾರ, ರಾಜ್ಯ ಮಟ್ಟದ ತರಬೇತಿದಾರರು ಡಾ.ಗೌತಮ ಅರಳಿ, ಬಿಕೆಡಿಬಿ ಆಯುಕ್ತ ರಮೇಶ ಕೋಲಾರ, ಸಿಎಂಸಿ ಕಮಿಷನರ್ ರಾಜು ಬಣಕರ, ತಾಪಂ ಇಒ ರಮೇಶ ಸುಲ್ಪಿ, ಸಿಪಿಐ ಅಲಿಸಾಬ್, ಮುಖ್ಯಗುರು ರಮೇಶ ರಾಜೋಳೆ, ಎಸ್‌ಬಿಎಂ ಐಇಸಿ ಸಂಯೋಜಕ ಪಂಡಿತ ವಾಡೇಕರ್, ಐಇಸಿ ಸಂಯೋಜಕ ವೀರಾರಡ್ಡಿ, ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಇಲಾಖೆ ಸಿಬ್ಬಂದಿ ಇದ್ದರು.

    ಕೋಟೆಯಿಂದ ಆರಂಭ: ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಮತದಾರರಲ್ಲಿ ಜಾಗೃತಿ ಮೂಡಿಸಲು ಗುರುವಾರ ಕೋಟೆಯಿಂದ ಆರಂಭಗೊAಡ ವಾಕಥಾನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗೋವಿಂದರಡ್ಡಿ ಹಸಿರು ನಿಸಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಗರದ ಕೋಟೆಯಿಂದ ಮುಖ್ಯರಸ್ತೆ ಮಾರ್ಗವಾಗಿ ಪ್ರಮುಖ ರಸ್ತೆಗಳ ಮೂಲಕ ರಥ ಮೈದಾನದವರೆಗೆ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts