ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಸೋಮವಾರಪೇಟೆ: ಪ್ರಾಥಮಿಕ ಶಾಲಾ ವಿಭಾಗದ ವಲಯ ಮಟ್ಟದ ಕ್ರೀಡಾಕೂಟ ತಾಲೂಕು ಒಕ್ಕಲಿಗರ ಸಂಘದ ಕುವೆಂಪು ಶಾಲೆಯಲ್ಲಿ ಸೋಮವಾರ ಉದ್ಘಾಟನೆಗೊಂಡಿತು.

ಕ್ರೀಡಾಕೂಟಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಚಾಲನೆ ನೀಡಿದರು. ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಪಠ್ಯ, ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ನೀಡಬೇಕು. ಕ್ರೀಡಾ ಚಟುವಟಿಕೆಗಳಿಂದ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವಿಜಯ ಕುಮಾರ್, ಒಕ್ಕಲಿಗರ ಸಂಘದ ಉಪಾಧ್ಯಕ್ಷ ರಾಘವ, ಕಾರ್ಯದರ್ಶಿ ಗಣಪತಿ, ಖಜಾಂಚಿ ಸುರೇಶ್, ಪದಾಧಿಕಾರಿಗಳಾದ ಎಸ್.ಜಿ.ಮೇದಪ್ಪ, ರಾಮಚಂದ್ರ, ಜಗದೀಶ್, ಶಿವಯ್ಯ, ಲಿಂಗರಾಜು, ಪೊನ್ನಪ್ಪ, ಮುಖ್ಯ ಶಿಕ್ಷಕಿ ಮಿಲ್‌ಡ್ರೆಡ್ ಗೊನ್ಸಾಲ್ವೆಸ್, ದೈಹಿಕ ಶಿಕ್ಷಣ ಶಿಕ್ಷಕರಾದ ಎನ್.ಎಂ.ನಾಗೇಶ್, ಇಂದಿರಾ, ವಸಂತಿ, ಮಂಜುಳಾ ಇದ್ದರು.

ಷಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ವಿಶ್ವಮಾನವ ಕುವೆಂಪು ಶಾಲೆ ಪ್ರಥಮ, ಸಾಂದೀಪನಿ ಶಾಲೆ ದ್ವಿತೀಯ ಸ್ಥಾನ ಗಳಿಸಿತು. ಬಾಲಕರ ವಿಭಾಗದಲ್ಲಿ ಕುವೆಂಪು ಶಾಲೆ ಪ್ರಥಮ ಹಾಗು ಜಿಎಂಪಿ ಶಾಲೆ ದ್ವಿತೀಯ ಸ್ಥಾನ ಗಳಿಸಿದೆ. ವಿವಿಧ ಪಂದ್ಯಾಟಗಳು ಆ.23, 24, 26ರಂದು ಗೌಡಳ್ಳಿ ಬಿಜಿಎಸ್ ಶಾಲಾ ಮೈದಾನದಲ್ಲಿ ನಡೆಯಲಿದ್ದು, ಕುವೆಂಪು ಶಾಲೆ ಕ್ರೀಡಾಕೂಟದ ಮೇಲುಸ್ತುವಾರಿ ವಹಿಸಿದೆ.

Leave a Reply

Your email address will not be published. Required fields are marked *