ಲಾರಿ ಪಲ್ಟಿ; ಚಾಲಕ, ಕ್ಲೀನರ್​ ಸೇರಿದಂತೆ 40 ಜಾನುವಾರುಗಳು ಸಾವು

Truck Accident
Published on

ಅನಂತಪುರಂ: ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಚಾಲಕ, ಕ್ಲೀನರ್​ ಸೇರಿದಂತೆ 40 ರಾಸುಗಳು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿ ನಡೆದಿದೆ.

ಅನಂತಪುರಂನ ರಾಷ್ಟ್ರೀಯ ಹೆದ್ದಾರಿ 44ರ ಕಾಸೆಪಲ್ಲಿ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದ್ದು, ಚಾಲಕ ಮತ್ತು ಕ್ಲೀನರ್ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪಾಮಿಡಿ ಪೊಲೀಸ್​ ಠಾಣಾಧಿಕಾರಿ ರೋಶನ್, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಡದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ, ಕ್ಲೀನರ್​ ಹಾಗೂ ಲಾರಿಯಲ್ಲಿದ್ದ ಜಾನುವಾರುಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೇನ್‌ಗಳ ಸಹಾಯದಿಂದ ಜಾನುವಾರುಗಳ ಮೃತದೇಹಗಳನ್ನು ಸ್ಥಳದಿಂದ ಹೊರತೆಗೆಯಲಾಯಿತು. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪಾಮಿಡಿ ಪೊಲೀಸ್​ ಠಾಣಾಧಿಕಾರಿ ರೋಶನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net