ಮುಂಡಗೋಡ: ತಾಲೂಕಿನ ಜೋಗೇಶ್ವರ ಹಳ್ಳದ ಸಮೀಪ ಶಿರಸಿ-ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿ ಚಾಲಕರು ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಶಿರಸಿ ಕಡೆಯಿಂದ ಬರುತ್ತಿದ್ದ ಲಾರಿ, ಮುಂಡಗೋಡ ಕಡೆಯಿಂದ ಹೊರಟಿದ್ದ ಮತ್ತೊಂದು ಲಾರಿ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿಯಾಗಿವೆ. ಗಾಯಗೊಂಡ ಲಾರಿ ಚಾಲಕರನ್ನು ಕಲಬುರ್ಗಿಯ ಮೌನೇಶ ಡೋಲಿ, ಶಿರಸಿಯ ಮಹೇಶ ಶಂಕರ ಎಂದು ಗುರುತಿಸಲಾಗಿದ್ದು, ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ಲಾರಿಗಳ ಮುಂಭಾಗ ನಜ್ಜು ಗುಜ್ಜಾಗಿವೆ. ಪ್ರಕರಣ ದಾಖಲಾಗಿದೆ.