More

    ಪಾದಚಾರಿ ಸಾವು: ಬಸ್‌ ಚಾಲಕನಿಗೆ 2 ವರ್ಷ ಜೈಲು ಶಿಕ್ಷೆ

    ಶಿವಮೊಗ್ಗ: ಶಿರಾಳಕೊಪ್ಪ-ಶಿಕಾರಿಪುರ ರಾಜ್ಯ ಹೆದ್ದಾರಿಯಲ್ಲಿ ಬಸ್‌ನ್ನು ಅತಿವೇಗ ಮತ್ತು ಅಜಾಗರುಕತೆಯಿಂದ ಚಲಾಯಿಸಿ ಪಾದಚಾರಿ ಸಾವಿಗೆ ಕಾರಣವಾಗಿದ್ದ ಚಾಲಕನಿಗೆ ಶಿಕಾರಿಪುರದ 1ನೇ ಅಧಿಕ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು 2 ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 5,800 ರೂ. ದಂಡ ವಿಧಿಸಿದೆ.
    ದಂಡ ಪಾವತಿಸಲು ವಿಫಲನಾದರೆ 3 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಸೊರಬ ತಾಲೂಕಿನ ಚಿಕ್ಕಬ್ಬೂರು ಗ್ರಾಮದ ಪಕೀರಪ್ಪ (29) ಜೈಲು ಶಿಕ್ಷೆಗೆ ಒಳಗಾದ ಚಾಲಕ. ಇವರು 2018ರ ಡಿ.30ರಂದು ರಾಜ್ಯ ಹೆದ್ದಾರಿಯಲ್ಲಿ ಬಸ್ ಚಲಾಯಿಸುವಾಗ ಪಾದಚಾರಿ ಉಡುಗಣಿ ಗ್ರಾಮದ ಶಕೀಲ್ (27) ಎಂಬುವರಿಗೆ ಡಿಕ್ಕಿ ಹೊಡೆಸಿದ್ದರು. ಈ ವೇಳೆ ಶಕೀಲ್ ಸ್ಥಳದಲ್ಲೇ ಮೃತಪಟ್ಟಿದ್ದರು.
    ಈ ಬಗ್ಗೆ ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ಶಿಕಾರಿಪುರ ವೃತ್ತ ನಿರೀಕ್ಷಕ ಬಸವರಾಜ್ ಅವರು ಚಾಲಕನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು.
    ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಅವಿನಾಶ ಎಂ ಗಾಲಿ ಅವರು ಚಾಲಕ ಪಕೀರಪ್ಪ ಮೇಲಿನ ಆರೋಪಗಳು ಸಾಬೀತಾಗಿದ್ದರಿಂದ ಕಾರಾವಾಸ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಎಸ್.ಎಂ.ಅರುಣಕುಮಾರ್ ವಾದ ಮಂಡಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts