ಬೈಕ್‌ಗೆ ಜೀಪ್ ಡಿಕ್ಕಿ; ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಐದು ಮಂದಿ ಮೃತ್ಯು

Driver taken into custody as 5 die after jeep hits bikes in Pune
Published on

ಪುಣೆ: ಬೈಕ್‌ಗೆ ಜೀಪ್ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಭೀಕರ ಅಪಘಾತದ ಹಿನ್ನೆಲೆ ಜೀಪ್​​ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತರನ್ನು ಸುಂದರಾಬಾಯಿ(28) ಗೌರವ್ ಮಾದೆ (5) ನಿತಿನ್​​ ಮಾದೆ(25) ಮತ್ತೊಂದು ಮಗುವಾಗಿದೆ. ಮೃತರಲ್ಲಿ ಒಬ್ಬರ ಹೆಸರು ಪತ್ತೆಯಾಗಿಲ್ಲ. ಅರ್ಚನಾ ಮಾದೆ ಮತ್ತು ಸುಹಾಸ್​​ ಮಾದೆ ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪುಣೆಯ ಜುನ್ನಾರ್‌ನಲ್ಲಿ ಜೀಪ್​​ವೊಂದು ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ನಂತರ ಪಿಕಪ್ ಜೀಪ್ ಚಾಲಕನನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಮೂವರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಸಂತ್ರಸ್ತರೆಲ್ಲರೂ ಕೃಷಿ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿ ಮನೆಗೆ ಬರುತ್ತಿದ್ದರು ಎನ್ನಲಾಗಿದೆ. ಜೀಪ್​ನ ಚಾಲಕ ಪಾನಮತ್ತನಾಗಿದ್ದ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಚಾಲಕನನ್ನು ವಿಚಾರಣೆಗೊಳಪಡಿಸಿ ನಂತರ ಖಚಿತ ಮಾಹಿತಿ ನೀಡಬಹುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net