More

    ಚೀನಾದಿಂದ ಬೆಂಗಳೂರಿಗೆ ಬಂತು ಡ್ರೈವರ್‌ಲೆಸ್ ಮೆಟ್ರೋ

    ಬೆಂಗಳೂರು: ನಮ್ಮ ಮೆಟ್ರೋ ಸಿಲಿಕಾನ್ ಸಿಟಿ ಬೆಂಗಳೂರಿನ ಜನರ ಪ್ರಯಾಣಕ್ಕೆ ನೆಚ್ಚಿನ ಸಾರಿಗೆಯಲ್ಲಿ ಒಂದಾಗಿದೆ. ಬೆಂಗಳೂರಿಗರು ಕಾತುರದಿಂದ ಕಾಯುತ್ತಿದ್ದ ಡ್ರೈವರ್ ರಹಿತ ಹಳದಿ ಮೆಟ್ರೋ ಕೊನೆಗೂ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ತಲುಪಿದೆ. ಈ ಕುರಿತಾದ ಕೆಲವು ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತಿವೆ.

    ಜನವರಿ 24 ರಂದು ಶಾಂಘೈ ಬಂದರಿನಿಂದ ಸಮುದ್ರ ಮಾರ್ಗವಾಗಿ ಕಳುಹಿಸಲಾದ ಮೆಟ್ರೋ ಟ್ರೈನ್ ಫೆಬ್ರವರಿ 6 ರಂದು ಚೀನಾದಿಂದ ಚೆನ್ನೈ ಬಂದರಿಗೆ ಬಂದು ತಲುಪಿತ್ತು. ಸದ್ಯ ಈಗ ಚೆನ್ನೈ ಬಂದರಿನಿಂದ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಚಾಲಕ ರಹಿತ ನಮ್ಮ ಮೆಟ್ರೋ ರೈಲು ಬಂದು ತಲುಪಿದೆ. ಟ್ರ‍್ಯಾಕ್‌ನಲ್ಲಿ ಚಲಿಸುವ ಮೊದಲು ಕೆಲವೊಂದು ಪರೀಕ್ಷೆಗಳನ್ನು ನಡೆಸಬೇಕಿದೆ.

    ಡ್ರೈವರ್‌ಲೆಸ್ ಮೆಟ್ರೋ ವಿಶೇಷತೆ: ಚೀನಾ-ಮಾಲೀಕತ್ವದ ಸಿಆರ್‌ಆರ್‌ಸಿ ನಾನ್‌ಜಿಂಗ್ ಪುಜೆನ್ ಕಂ. ಲಿಮಿಟೆಡ್‌ನಿಂದ ತಯಾರಿಸಲ್ಪಟ್ಟ ಈ ರೈಲು ಚಾಲಕ ರಹಿತವಾಗಿದೆ. ಈ ರೈಲು ಆರ್‌ವಿ ರಸ್ತೆ-ಬೊಮ್ಮಸಂದ್ರ ಲೈನ್‌ನಲ್ಲಿ ಸಂಚರಿಸಲಿದೆ. ಆರು ಬೋಗಿಗಳನ್ನು ಹೊಂದಿದ್ದರು ಪ್ರತಿ ಕೋಚ್ 38.7 ಮೆಟ್ರಿಕ್ ಟನ್ ತೂಕವಿದೆ.

    ಚಾಲಕ ಇಲ್ಲದಿದ್ದರೂ ಈಗಾಗಲೇ ಅಳವಡಿಸಲಾದ ಪ್ರೋಗ್ರಾಂ ಆಧಾರದ ಮೇಲೆ ರೈಲು ಸಂಚರಿಸಲಿದೆ. ರೈಲಿನ ಸಂಚಾರವನ್ನು ಕಂಟ್ರೋಲ್‌ ರೂಮ್​ನಲ್ಲಿ ನಿಗಾ ವಹಿಸಲಾಗುತ್ತದೆ. ಚಾಲಕ ಇಲ್ಲದೇ ಈ ಮೆಟ್ರೋ ಗಂಟೆಗೆ 80 ಕಿ.ಮೀ. ವೇಗದಲ್ಲಿ ಚಲಿಸಲಿದೆ. 25 ಕೆವಿ ಸಾಮರ್ಥ್ಯದ ವಿದ್ಯುತ್‌ ಸಹಾಯದಿಂದ ಸಂಚರಿಸುತ್ತದೆ.

    ಸಿಸಿಟಿವಿ ಕ್ಯಾಮೆರಾಗಳನ್ನೂ ಬೋಗಿಗಳಲ್ಲಿ ಅಳವಡಿಸಲಾಗಿದೆ. ಸಂಚಾರದಲ್ಲಿ ಸಮಸ್ಯೆ ಉಂಟಾದರೆ ತಕ್ಷಣ ಓಸಿಸಿಗೆ ಸಂದೇಶ ರವಾನೆ ಆಗಲಿದೆ. ಆಗ ತಕ್ಷಣ ರೈಲಿನ ಸಂಚಾರವನ್ನು ನಿಲ್ಲಿಸಲಾಗುತ್ತೆ. ಈ ರೈಲು ಆರ್‌ವಿ ರಸ್ತೆ-ಬೊಮ್ಮಸಂದ್ರ ಲೈನ್‌ನಲ್ಲಿ ಸಂಚರಿಸಲಿದೆ. ಟ್ರ‍್ಯಾಕ್‌ನಲ್ಲಿ ಚಲಿಸುವ ಮೊದಲು ಕೆಲವೊಂದು ಪರೀಕ್ಷೆಗಳನ್ನು ನಡೆಸಬೇಕಿದೆ ಎನ್ನಲಾಗಿದೆ.

    ಕಸದಿಂದ ಕೋಟಿ..ಕೋಟಿ ಸಂಪಾದನೆ; ಚಿಂದಿ ಆಯುವವರ ನಿತ್ಯದ ಆದಾಯ 5 ಕೋಟಿ ರೂಪಾಯಿ

    ಒಂದೇ ಮನೆ, 39 ಪತ್ನಿಯರು, 94 ಮಕ್ಕಳು, 14 ಸೊಸೆಯಂದಿರು, 40 ಮೊಮ್ಮಕ್ಕಳು ಆದ್ರೆ ಯಜಮಾನ ಮಾತ್ರ ಒಬ್ಬನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts