ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

ಬೀಡಿ: ಖಾನಾಪುರ ತಾಲೂಕಿನ ಕಸಮಳಗಿ ಬಳಿ ಬುಧವಾರ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿದೆ. 25 ಜನ ಪ್ರಯಾಣಿಕರನ್ನು ಹೊತ್ತು ಕಿತ್ತೂರು ಕಡೆಯಿಂದ ಬೀಡಿ ಗ್ರಾಮಕ್ಕೆ ಆಗಮಿಸುತ್ತಿರುವ ವೇಳೆ ಅವಘಡ ಸಂಭವಿಸಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.