More

    ಚಾಲಕರು ರಸ್ತೆ ಸುರಕ್ಷತಾ ನಿಯಮ ಪಾಲಿಸಿ

    ಕೆ.ಆರ್.ಪೇಟೆ : ವಾಹನಗಳ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಅಪಘಾತಮುಕ್ತವಾಗಿ ವಾಹನಗಳನ್ನು ಚಾಲನೆ ಮಾಡಬೇಕು ಎಂದು ನಾಗಮಂಗಲ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ್ ಹೇಳಿದರು.

    ಪಟ್ಟಣದ ಶಿಕ್ಷಕರ ಭವನದ ಸಭಾಂಗಣದಲ್ಲಿ 35ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಕೆ.ಆರ್.ಪೇಟೆ ತಾಲೂಕಿನ ವಿವಿಧ ಶಾಲೆಗಳ ಶಾಲಾ ವಾಹನಗಳ ಚಾಲಕರಿಗೆ ಬುಧವಾರ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಶಾಲಾ ವಾಹನಗಳ ಚಾಲಕರು ತಮ್ಮ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡು, ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಅತ್ಯಂತ ಜಾಗ್ರತೆಯಿಂದ ಚಾಲನೆ ಮಾಡಬೇಕು. ನಿಮ್ಮ ವಾಹನದಲ್ಲಿ ಅಮೂಲ್ಯವಾದ ಜೀವಗಳಿವೆ ಎಂಬುದನ್ನು ನೀವು ಮೊದಲು ಅರಿತು ವಾಹನ ಚಾಲನೆ ಮಾಡಬೇಕು. ಮದ್ಯ ಕುಡಿದು ಹಾಗೂ ಮೊಬೈಲ್‌ನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡಬಾರದು ಎಂದರು.

    ನಾಗಮಂಗಲ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಸಂಚಾರ ನಿರೀಕ್ಷಕ ಸತೀಶ್ ವಾಹನ ಚಾಲನೆ ಮಾಡುವಾಗ ಅನುಸರಿಸಬೇಕಾದ ಎಚ್ಚರಿಕೆ ಕ್ರಮಗಳು ಹಾಗೂ ನಿಯಮಗಳ ಕುರಿತು ಉಪನ್ಯಾಸ ನೀಡಿದರು.

    ಶಿಕ್ಷಣ ಸಂಯೋಜಕ ವೇಣುಗೋಪಾಲ್, ಸಾರಿಗೆ ಇಲಾಖೆಯ ಅಧಿಕಾರಿಗಳಾದ ರಾಧಾಕೃಷ್ಣ, ಸಬೀನಾಬಾನು, ಸಂಜಯ್, ಸಮಾಜ ಸೇವಕ ಮಲ್ಲಿಕಾರ್ಜುನ್ ಅಭಿಮಾನಿಗಳ ಬಳಗದ ಅಧ್ಯಕ್ಷ ಗಂಜಿಗೆರೆ ಮಹೇಶ್ ಸೇರಿದಂತೆ ಶಾಲಾ ವಾಹನಗಳ ಚಾಲಕರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts