More

    ಚಾಲಕರಿಗಿದೆ ಹೆಚ್ಚಿನ ಜವಾಬ್ದಾರಿ

    ಕಡೂರು: ಶಾಲಾ ಆಡಳಿತ ಮಂಡಳಿಯಷ್ಟೇ ಜವಾಬ್ದಾರಿ ಶಾಲಾ ವಾಹನ ಚಾಲಕರಿಗೂ ಇರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಪಿಎಸ್‌ಐ ಧನಂಜಯ ಹೇಳಿದರು.
    ಬುಧವಾರ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಜ್ಞಾ ಶಾಲೆಯ ವಾಹನ ಚಾಲಕರಿಗೆ ಏರ್ಪಡಿಸಿದ್ದ ತಿಳಿವಳಿಕೆ ಕಾರ್ಯಕ್ರಮದಲ್ಲಿ ಕಾನೂನು ಜಾಗೃತಿ ಮೂಡಿಸಿ ಮಾತನಾಡಿದರು.
    ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಬಗ್ಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಂಡಿರುತ್ತದೆ. ಆದರೆ ಶಾಲೆಗೆ ಮಕ್ಕಳನ್ನು ಕರೆತರುವ ಮತ್ತು ಮನೆಗೆ ಬಿಡುವ ವಾಹನ ಚಾಲಕರ ಜವಾಬ್ದಾರಿ ಮಹತ್ವದ್ದಾಗಿದೆ ಎಂದರು.
    ಚಾಲಕರು ಶಾಲೆಯ ನಿಯಮಗಳ ಜತೆ ವಾಹನ ಚಾಲನಾ ನಿಯಮಗಳ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಶಾಲಾ ಸಮಯಕ್ಕೆ ತಡವಾದರೆ ಅತಿ ವೇಗವಾಗಿ ಚಾಲನೆ ಮಾಡುವುದು, ಚಾಲನೆ ಮಾಡುವಾಗ ಮೊಬೈಲ್ ಬಳಸುವುದು, ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ಚಾಲನಾ ಪರವಾನಗಿ ಕಡ್ಡಾಯವಾಗಿ ಹೊಂದಿರಬೇಕು. ಅವಧಿ ಮುಗಿದ ಕೂಡಲೇ ನವೀಕರಿಸಬೇಕು. ಮುಖ್ಯವಾಗಿ ಶಾಲಾ ಮಕ್ಕಳ ಹಾಗೂ ವಿದ್ಯಾರ್ಥಿನಿಯರ ಸುರಕ್ಷತೆ ಬಗ್ಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು. ತಮ್ಮ ನಡವಳಿಕೆಯೆ ಶಾಲೆಗೆ ಒಳ್ಳೆಯ ಹೆಸರು ತರುತ್ತದೆಯೆಂಬುದನ್ನು ಮರೆಯಬಾರದು ಎಂದು ತಿಳಿಸಿದರು. ಪಿಎಸ್‌ಐ ಪವನ್ ಕುಮಾರ್ ಮತ್ತು ಪೊಲೀಸ್ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts