21 C
Bengaluru
Wednesday, January 22, 2020

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ ಸರ್ವೆ ತಲೆನೋವಿಗೆ ಮುಕ್ತಿ ಸಿಗಲಿದೆ.

ಹೊಸನಗರದ ನಿಟ್ಟೂರು (ನಾಗೋಡಿ) ಗ್ರಾಪಂ ವ್ಯಾಪ್ತಿಯ ಮಂಜಗಳಲೆ ಗ್ರಾಮದಲ್ಲಿ ಶುಕ್ರವಾರ ಒಂದೇ ದಿನ ಹಂತಹಂತವಾಗಿ ಡ್ರೋನ್ ಮೂಲಕ ಮೂರು ಬ್ಲಾಕ್​ಗಳ ಸರ್ವೆ ನಡೆಸಲಾಗಿದೆ. ಶಿವಮೊಗ್ಗ ವೃತ್ತದ ಸಿಸಿಎಫ್ ಶ್ರೀನಿವಾಸಲು ನೇತೃತ್ವದಲ್ಲಿ ಈ ಕಾರ್ಯ ನಡೆದಿದೆ. ಬೆಂಗಳೂರಿಗೆ ಸರ್ವೆ ವಿವರ ಕಳುಹಿಸಲಾಗಿದ್ದು 15 ದಿನದಲ್ಲಿ ವರದಿ ನಿರೀಕ್ಷಿಸಲಾಗಿದೆ.

ಅರಣ್ಯ ಇಲಾಖೆ ಸದ್ಯ ಜಿಪಿಎಸ್ ಆಧರಿಸಿ ಮ್ಯಾನುಯಲ್ ಸರ್ವೆ ಮಾಡಿಕೊಂಡು ಬರುತ್ತಿದೆ. ಆಧುನಿಕ ತಂತ್ರಜ್ಞಾನದ ಮೂಲಕ ಪ್ರಾಯೋಗಿಕವಾಗಿ ಏರಿಯಲ್ ಸರ್ವೆ ನಡೆಸಿ ಬಂದ ಮಾಹಿತಿಯನ್ನು ಈಗಾಗಲೇ ಜಿಪಿಎಸ್ ಆಧರಿಸಿ ನಡೆಸಿರುವ ಮ್ಯಾನುಯಲ್ ಸರ್ವೆ ಮಾಹಿತಿ ಜತೆ ತುಲನೆ ಮಾಡಲಾಗುತ್ತದೆ. ಅಲ್ಲದೆ ಈಗಾಗಲೇ ನಡೆಸಿರುವ ಸರ್ವೆಯನ್ನು ಮರು ಸ್ಥಾಪನೆಗೊಳಿಸುವುದು, ಆ ಸರ್ವೆಯಲ್ಲಿ ಅರಣ್ಯ ಮತ್ತು ಕಂದಾಯ ಪ್ರದೇಶದ ಬಗೆಗಿನ ಗೊಂದಲ ಬಗೆಹರಿಸಲಾಗುತ್ತದೆ.

ಸ್ಥಳೀಯರ ಸಹಕಾರ: ಸಿಸಿಎಫ್ ಶ್ರೀನಿವಾಸಲು ನೇತೃತ್ವದಲ್ಲಿ ಡ್ರೋನ್ ಮೂಲಕ ನಡೆಸಿದ ಸರ್ವೆ ಕಾರ್ಯಕ್ಕೆ ಅರಣ್ಯ ಹಕ್ಕು ಸಮಿತಿ ಹೋರಾಟಗಾರ ವಿ.ಜಿ.ಶ್ರೀಕರ್ ನೇತೃತ್ವದಲ್ಲಿ ಸ್ಥಳೀಯರು ಸಹಕಾರ ನೀಡಿದರು. ಡಿಸಿಎಫ್ ಮೋಹನ್ ಕುಮಾರ್, ಸ್ಥಳೀಯ ಆರ್​ಎಫ್​ಒ ಎಂ.ಪಿ.ಆದರ್ಶ, ಎಆರ್​ಎಫ್​ಒ ಸತೀಶ್ ನಾಯ್್ಕ ಪಾಲ್ಗೊಂಡಿದ್ದರು.

ಪ್ರಯೋಜನವೇನು?

ನಿಟ್ಟೂರಿನಲ್ಲಿ ಪ್ರಾಯೋಗಿಕವಾಗಿ ನಡೆಸಿದ ಏರಿಯಲ್ ಸರ್ವೆ ಯಶಸ್ವಿಯಾದಲ್ಲಿ ಮಲೆನಾಡು ಭಾಗದ ಬಹುತೇಕ ಜನರಿಗೆ ವರದಾನ ಆಗಲಿದೆ. ಮ್ಯಾನುಯಲ್ ಸರ್ವೆಗೆ ಡ್ರೋನ್ ಸರ್ವೆಯನ್ನು ತುಲನೆ ಮಾಡಿದಲ್ಲಿ ಮ್ಯಾನ್​ಪವರ್, ಕಾಲಮಿತಿ ಎಲ್ಲವೂ ಕಡಿಮೆ. ಶೀಘ್ರದಲ್ಲಿ ಅರಣ್ಯ ಪ್ರದೇಶ ಗುರುತಿಸುವಲ್ಲೂ ಸಹಕಾರಿ ಆಗಲಿದೆ. ಜಿಪಿಎಸ್ ಆಧಾರದಲ್ಲಿ ನಡೆಯುವ ಮ್ಯಾನುಯಲ್ ಸರ್ವೆಯನ್ನು ದಟ್ಟ ಕಾನನದಲ್ಲಿ ಪರಿಣಾಮಕಾರಿಯಾಗಿ ನಡೆಸುವುದು ಕಷ್ಟ. ಅಲ್ಲದೆ ನಿಗದಿತ ಅವಧಿಯೊಳಗೆ ಮುಗಿಸುವುದೂ ದುಸ್ತರ. ಕ್ಯಾಮರಾ ಮೂಲಕ ನಡೆಸುವ ಏರಿಯಲ್ ಸರ್ವೆ ನಿಖರವಾಗಿದ್ದು, ಇಲಾಖೆ ಮತ್ತು ಸಾರ್ವಜನಿಕರ ನಡುವಿನ ಜಟಾಪಟಿಗೆ ಅವಕಾಶ ಇರುವುದಿಲ್ಲ. ಬಹುಮುಖ್ಯವಾಗಿ ರಾಜ್ಯದ ಬಹುತೇಕ ಭಾಗದಲ್ಲಿ ತಲೆ ಎತ್ತಿರುವ ಅರಣ್ಯ ಮತ್ತು ಕಂದಾಯ ಪ್ರದೇಶದ ಸಮಸ್ಯೆಗೆ ಮುಕ್ತಿ ಸಿಗಲಿದೆ.

ಅರಣ್ಯ ಇಲಾಖೆ ಡ್ರೋನ್ ಸರ್ವೆಗೆ ಮುಂದಾಗಿರುವುದು ಸ್ವಾಗತಾರ್ಹ. ಚಾಲನೆಗೆ ಬಂದಲ್ಲಿ ಕಚೇರಿಯಲ್ಲೇ ಕುಳಿತು ಕಾರ್ಯನಿರ್ವಹಿಸಬಹುದು. ಯಾವುದೇ ತರಹದ ಬೋಗಸ್​ಗೆ ಅವಕಾಶವಿಲ್ಲ. ಸಾರ್ವಜನಿಕರು ಮತ್ತು ಇಲಾಖೆ ನಡುವೆ ಗೊಂದಲ ಬರಲ್ಲ.

|ವಿ.ಜಿ.ಶ್ರೀಕರ ತಾಂತ್ರಿಕ ತಜ್ಞ

ಈಗ ಎಲ್ಲದಕ್ಕೂ ತಂತ್ರಜ್ಞಾನ ಬಂದಿದೆ. ಅರಣ್ಯ ಇಲಾಖೆಯ ಬಹುದೊಡ್ಡ ಸಮಸ್ಯೆ ಸರ್ವೆ ಕಾರ್ಯ. ಡ್ರೋನ್ ತಂತ್ರಜ್ಞಾನದ ಮೂಲಕ ಸರ್ವೆ ಯಶಸ್ವಿ ಆದಲ್ಲಿ ಭವಿಷ್ಯದಲ್ಲಿ ಸಹಕಾರಿ ಆಗಲಿದೆ. ನಿಟ್ಟೂರು ವ್ಯಾಪ್ತಿ ಮಂಜಗಳಲೆ ಗ್ರಾಮದಲ್ಲಿ ನಡೆಸಿದ ಸರ್ವೆಯ ಸಮಗ್ರ ಮಾಹಿತಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.

|ಶ್ರೀನಿವಾಸಲು ಶಿವಮೊಗ್ಗ ವಲಯ ಸಿಸಿಎಫ್

| ರವಿ ಬಿದನೂರು ನಗರ(ಶಿವಮೊಗ್ಗ)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...