ಸರ್ಕಾರಿ ಶಾಲೆಯಿಂದ ‘ಕೆಜಿ’ ಕೈಬಿಡಿ

ಮಂಡ್ಯ: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವುದನ್ನು ಕೈಬಿಟ್ಟು ಅಂಗನವಾಡಿಗಳನ್ನೇ ಬಲಪಡಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಿಲ್ವರ್ ಜ್ಯೂಬಿಲಿ ಉದ್ಯಾನದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತೆಯರು, ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ತೆರಳಿ ಡಿಸಿ ಕಚೇರಿಯ ಬಳ ತೆರಳಿ, ನಂತರ ಧರಣಿ ನಡೆಸಿದರು. 1975ರಲ್ಲಿ ಜಾರಿಗೆ ಬಂದ ಐಸಿಡಿಎಸ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳು ಸ್ಥಾಪಿಸಲಾಗಿದ್ದು, ಪ್ರಸ್ತುತ 16,40,170 ಮಕ್ಕಳು ದಾಖಲಾಗಿದ್ದಾರೆ. ಇದೀಗ ಈ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ದಾಖಲಾದರೆ, ಅಂಗನವಾಡಿ ಕಥೆ ಏನು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಆದ್ದರಿಂದ, ಅಂಗನವಾಡಿ ಕೇಂದ್ರದಲ್ಲಿ ನಡೆಯುತ್ತಿರುವ ಮಾತೃಪೂರ್ಣ ಕೆಲಸಕ್ಕೆ ಒಬ್ಬ ಹೆಚ್ಚುವರಿ ಸಹಾಯಕಿಯನ್ನು ನೇಮಿಸಬೇಕು. ಖಾಸಗಿ ಕಾನ್ವೆಂಟ್‌ಗಳಿಗೆ ಪ್ರಾರಂಭಿಸಲು ಅನುಮತಿ ನೀಡಬಾರದು. ಅಂಗನವಾಡಿ ಮಕ್ಕಳಿಗೂ ಸಮವಸ್ತ್ರ ಕೊಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ನಂತರ ಜಿಲ್ಲಾಧಿಕಾರಿ ಕಚೇರಿಯ ತಹಸೀಲ್ದಾರ್ ಕೃಷ್ಣಪ್ಪ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಸಿ.ಕುಮಾರಿ, ಪ್ರಮೀಳಾಕುಮಾರಿ, ಲತಾ, ಕಮಲಾ, ಗೀತಾ, ಸಾವಿತ್ರಮ್ಮ, ಸವಿತಾ, ಧನಲಕ್ಷ್ಮೀ, ಗಾಯತ್ರಿ, ಶಿಲ್ಪಾ, ಚಂಪಕುಮಾರಿ, ಶಶಿಕಲಾ, ಸೌಭಾಗ್ಯ ಇತರರಿದ್ದರು.

Leave a Reply

Your email address will not be published. Required fields are marked *