More

    ಗ್ಯಾರಂಟಿಗಳ ನಡುವೆ ಬರ ನಿರ್ವಹಣೆ ಉತ್ತಮ

    ಶಿವಮೊಗ್ಗ: ಗ್ಯಾರಂಟಿಗಳ ನಡುವೆಯೂ ರಾಜ್ಯ ಸರ್ಕಾರ ಬರ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿದ್ದು ಜತೆಗೆ ಬರ ನಿರ್ವಹಣೆಗೆ ಹಣದ ಕೊರತೆಯೂ ಎದುರಾಗಿಲ್ಲ. ಈಗಾಗಲೇ ಜಿಲ್ಲಾಧಿಕಾರಿಗಳ ಖಾತೆಗೆ ಬರ ನಿರ್ವಹಣೆಗೆ ಸಾಕಾಗುವಷ್ಟು ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.

    ಶಿವಮೊಗ್ಗ ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವು ಮತ್ತು ವಿದ್ಯುತ್ ಪೂರೈಕೆಗೆ ತಾತ್ಕಲಿಕವಾಗಿ ಯಾವುದೇ ಸಮಸ್ಯೆಗಳಿಲ್ಲ. ಮುಂಗಾರು ಕೊರತೆ ಕಾರಣದಿಂದ ಡಿಸೆಂಬರ್ ನಂತರ ಒಂದೊಂದೇ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದ್ದು 238 ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಲಾಗಿದೆ. ಸದ್ಯ ಆನವಟ್ಟಿ ಮತ್ತು ಸೊರಬದ ತಲಾ ಒಂದು ವಾರ್ಡ್‌ಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ನೀರು, ವಿದ್ಯುತ್ ಮತ್ತು ಮೇವು ಕೊರತೆ ಸಂಬಂಧ ನ.15ರೊಳಗೆ ವರದಿ ತರಿಸಿಕೊಳ್ಳುವಂತೆ ಸಿಎಂ ಎಲ್ಲ ಮಂತ್ರಿಗಳಿಗೂ ಸೂಚಿಸಿದ್ದರು. ಈಗಾಗಲೇ ಅಧಿಕಾರಿಗಳಿಂದ ವರದಿ ತರಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ವಾರಕ್ಕೆ 27 ಸಾವಿರ ಟನ್ ಮೇವಿನಂತೆ ಒಟ್ಟಾರೆ 6.42 ಲಕ್ಷ ಮೆಟ್ರಿಕ್ ಟನ್ ಲಭ್ಯವಿದ್ದು ಮುಂದಿನ ಅವಧಿಗೆ ಸಾಕಾಗಲಿದೆ ಎಂದರು.
    ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ, ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ಮುಖಂಡರಾದ ಎಚ್.ಸಿ.ಯೋಗೇಶ್, ಎಸ್.ಕೆ.ಮರಿಯಪ್ಪ, ಕಲಗೋಡು ರತ್ನಾಕರ್, ಚಂದ್ರಭೂಪಾಲ್, ಜಿ.ಡಿ.ಮಂಜುನಾಥ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts