More

    ಬರ ನಿರ್ಲಕ್ಷ್ಯ, ಸರ್ಕಾರದ ವಿರುದ್ಧ ಹೋರಾಟ; ನ.4 ರಂದು ಜೆಡಿಎಸ್ ಸಭೆಯಲ್ಲಿ ತೀರ್ಮಾನ

    ಬೆಂಗಳೂರು: ಬಿಜೆಪಿ ಬರ ಅಧ್ಯಯನಕ್ಕೆ ನಿರ್ಧರಿಸಿದ ಬೆನ್ನಲ್ಲೇ ಜೆಡಿಎಸ್ ಕೂಡ ಬರ ನಿರ್ವಹಣೆಯಲ್ಲಿ ಸರ್ಕಾರದ ವೈಲ್ಯ ಖಂಡಿಸಿ ಹೋರಾಟ ರೂಪಿಸುವ ನಿಟ್ಟಿನಲ್ಲಿ ಜೆಡಿಎಸ್ ನ.4 ರಂದು ಮಹತ್ವದ ಸಭೆ ನಡೆಸಲಿದೆ.

    ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಮಳೆ-ಬೆಳೆ ಸ್ಥಿತಿಗತಿ, ಕುಡಿಯುವ ನೀರಿನ ಸಮಸ್ಯೆ, ಬೆಳೆ ನಷ್ಟ ಪರಿಹಾರ ನೀಡುವಲ್ಲಿ ಸರ್ಕಾರದ ನಿರ್ಲಕ್ಷ್ಯ ಕುರಿತು ಚರ್ಚಿಸಲಿದೆ.

    ಬರ ಅಧ್ಯಯನಕ್ಕಾಗಿ ತಂಡ ರಚನೆ ಮಾಡುವುದು, ಸರ್ಕಾರದ ವಿರುದ್ಧ ಯಾವ ರೀತಿ ಹೋರಾಟ ರೂಪಿಸಬಹುದು ಎಂಬ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.

    ಪಕ್ಷದ ಕೋರ್ ಕಮಿಟಿ ಅಧ್ಯಕ್ಷ, ಸದಸ್ಯರು, ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಸೇರಿದಂತೆ ವಿವಿಧ ಘಟಕಗಳ ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಬಿಜೆಪಿ ಜತೆಗಿನ ಮೈತ್ರಿ, ಪಕ್ಷದಲ್ಲಿನ ಶಾಸಕರ ಅಸಮಾಧಾನ, ಲೋಕಸಭೆ ಟಿಕೆಟ್ ಹಂಚಿಕೆ ಕುರಿತು ಸಮಾಲೋಚನೆ ನಡೆಯಲಿದೆ ಎಂದು ಹೇಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts