More

    ಬರ ಘೋಷಣೆ: ಕೇಂದ್ರ ಮಾರ್ಗಸೂಚಿ ಸಡಿಲಗೊಳಿಸದಿದ್ದರೆ ಈಗಿರುವಂತೆಯೇ ಘೋಷಣೆ

    ಬೆಂಗಳೂರು: ಕೇಂದ್ರ ಸರ್ಕಾರದ ಬರ ಘೋಷಣೆಗೆ ಸಂಬಂಧಿಸಿದ ಮಾರ್ಗಸೂಚಿ ಸಡಿಲಗೊಳಿಸದೇ ಇದ್ದರೆ ಈಗಿರುವ ಮಾರ್ಗಸೂಚಿ ಪ್ರಕಾರವೇ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

    ಕೃಷಿ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬರ ಘೋಷಣೆಯ ಮಾರ್ಗಸೂಚಿಗಳನ್ನು ಸಡಿಲ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಮಾರ್ಗಸೂಚಿ ಸಡಿಲ ಮಾಡಿದರೆ ಅದರ ಪ್ರಕಾರ ಬರ ಘೋಷಣೆ ಮಾಡಲಾಗುವುದು. ಇಲ್ಲದಿದ್ದರೆ ಹಳೆಯ ಮಾರ್ಗಸೂಚಿ ಅನ್ವಯವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕಾಗುತ್ತದೆ ಎಂದು ತಿಳಿಸಿದರು.

    ಶೇ.60ಕ್ಕಿಂತ ಹೆಚ್ಚು ಮಳೆ ಕೊರತೆ ಇದ್ದು, ಸತತ ಮೂರು ವಾರಗಳ ಕಾಲ ಒಣಹವೆ ಇರಬೇಕು ಎಂದು ಈಗಿರುವ ಮಾರ್ಗಸೂಚಿಯಲ್ಲಿದೆ. ಶೇ.60ಕ್ಕಿಂತ ಹೆಚ್ಚು ಮಳೆ ಕೊರತೆ ಇರುವುದನ್ನು ಶೇ.30ಕ್ಕೆ ಇಳಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು. ರಾಜ್ಯದಲ್ಲಿ ಜೂನ್ 1ರಿಂದ ಜೂ.16ರವರೆಗೆ ಸರಾಸರಿ 472 ಮಿ.ಮೀ ಮಳೆಯಾಗಿದ್ದು, ಶೇ.22ರಷ್ಟು ಮಳೆ ಕೊರತೆ ಉಂಟಾಗಿದೆ. ಆ.11ರಿಂದ 5 ದಿನ ಮಳೆಯಾಗುವ ಮುನ್ಸೂಚನೆ ಇತ್ತು. ಆದರೆ ಮಳೆಯಾಗಿಲ್ಲ ಎಂದು ಹೇಳಿದರು.

    ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆ. ಬಿತ್ತನೆ ಗುರಿ ಹೊಂದಲಾಗಿದೆ. ಈಗಾಗಲೇ 61.72 ಲಕ್ಷ ಹೆ. ಬಿತ್ತನೆಯಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಾಕಷ್ಟು ದಾಸ್ತಾನು ಇದ್ದು ರೈತರಿಗೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದರು.

    ಕೃಷಿ ಭಾಗ್ಯ ಯೋಜನೆಯಡಿ 100 ಕೋಟಿ ರೂ., ಕೃಷಿ ನವೋದ್ಯಮ ಯೋಜನೆಯಡಿ 10 ಕೋಟಿ, ಆಧುನಿಕ ಕಟಾವು ಯಂತ್ರಗಳ ಕೇಂದ್ರ ಸ್ಥಾಪನೆಗೆ 50 ಕೋಟಿ ರೂ.ಗಳನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗಿದೆ. ಅಲ್ಲದೆ 100 ಹೈಟೆಕ್ ಹಾರ್ವೆಸ್ಟರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಚಲುವರಾಯಸ್ವಾಮಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts