20.4 C
Bangalore
Monday, December 9, 2019

ಹಿಂಗಾರು ಮಳೆ ಶೇ.48 ಕೊರತೆ!

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಬೆಂಗಳೂರು: ಹಿಂಗಾರು ಡಿ.31ಕ್ಕೆ ಮುಕ್ತಾಯವಾಗಿದ್ದು, ಈ ಅವಧಿಯಲ್ಲಿ ವಾಡಿಕೆಯ ಅರ್ಧದಷ್ಟೂ ಮಳೆಯಾಗದಿರುವುದು ರಾಜ್ಯದ ಬಹುತೇಕ ತಾಲೂಕುಗಳಲ್ಲಿ ಬರದ ಸ್ಥಿತಿ ನಿರ್ಮಾಣ ಮಾಡಿದೆ. ದಕ್ಷಿಣಕನ್ನಡ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲೂ ಈ ಬಾರಿ ಮಳೆ ಕೊರತೆಯಾಗಿದೆ.

ಹವಾಮಾನ ಇಲಾಖೆ ಮಾಹಿತಿಯಂತೆ ಅ.1ರಿಂದ ಡಿ.31ರವರೆಗೆ ರಾಜ್ಯದಲ್ಲಿ ವಾಡಿಕೆಯಂತೆ 188.1 ಮಿ.ಮೀ. ಮಳೆ ಆಗಬೇಕು. ಆದರೆ ಕೇವಲ 97.9 ಮಿ.ಮೀ. ಮಳೆಯಾಗಿದ್ದು, ಶೇ.48 ಮಳೆ ಕೊರತೆಯಾಗಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಉತ್ತರ ಕರ್ನಾಟಕದ 11 ಜಿಲ್ಲೆಗಳಲ್ಲಿ ಸರಾಸರಿ 145.7 ಮಿ.ಮೀ. ಮಳೆಯಾಗಬೇಕು. ಆದರೆ ಕೇವಲ 50.3 ಮಿ.ಮೀ. ಮಳೆಯಾಗಿದ್ದು, ಶೇ.65 ಮಳೆ ಕೊರತೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.42 ಹಾಗೂ ಕರಾವಳಿಯಲ್ಲಿ ಶೇ.31 ಮಳೆ ಕೊರತೆಯಾಗಿದೆ.

ಶೇ.50ಕ್ಕಿಂತ ಹೆಚ್ಚು ಮಳೆ ಕೊರತೆ: ಭಾರತೀಯ ಹವಾಮಾನ ಇಲಾಖೆ ಪ್ರಸಕ್ತ ಹಿಂಗಾರಿನಲ್ಲಿ ವಾಡಿಕೆ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಆದರೆ ಬಳ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಕಲಬುರಗಿ ಜಿಲ್ಲೆಗಳಲ್ಲಿ ವಾಡಿಕೆ ಮಳೆ ಶೇ.50ಕ್ಕಿಂತ ಹೆಚ್ಚು ಕೊರತೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ (ಶೇ.60ಕ್ಕಿಂತ ಅಧಿಕ)ಆಗಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಷ್ಟೇ ವಾಡಿಕೆ ಮಳೆಯಾಗಿದೆ.

ಬೇಸಿಗೆಯಲ್ಲಿ ಪರಿಸ್ಥಿತಿ ಗಂಭೀರ

ಸೆಪ್ಟೆಂಬರ್​ನಿಂದ ರಾಜ್ಯದಲ್ಲಿ ನಿರೀಕ್ಷಿತ ಮಳೆಯಾಗದ್ದರಿಂದ ಡಿಸೆಂಬರ್​ನಲ್ಲೇ ಅಂತರ್ಜಲ ಮಟ್ಟ ಕುಸಿದಿದೆ ಎಂದು ಕೆಎಸ್​ಎನ್​ಡಿಎಂಸಿ ನಿರ್ದೇಶಕ ಡಾ.ಜಿ.ಎಸ್. ಶ್ರೀನಿವಾಸ ರೆಡ್ಡಿ ‘ವಿಜಯವಾಣಿ’ಗೆ ಮಾಹಿತಿ ನೀಡಿದರು. ಕೆಲ ಬಾವಿಗಳಲ್ಲಿ ನೀರಿನ ಪ್ರಮಾಣ ಇಳಿದಿದೆ. ರಾಜ್ಯಾದ್ಯಂತ ಇರುವ 3,611 ಸಣ್ಣ ನೀರಾವರಿ ಕೆರೆಗಳ ಪೈಕಿ ಶೇ.46 ಕೆರೆಗಳಲ್ಲಿ ನೀರಿನ ಪ್ರಮಾಣ ಶೇ.30-50 ಇದೆ, ಶೇ.40 ಕೆರೆಗಳು ಒಣಗಿವೆ. ಫೆಬ್ರವರಿ ನಂತರ ಕುಡಿಯುವ ನೀರು, ಮೇವು ಕೊರತೆ ಹೆಚ್ಚಾಗಲಿದೆ ಎಂದರು.

ತೀವ್ರ ಕೊರತೆ 4ನೇ ಬಾರಿ

1971ರಿಂದ ಇಲ್ಲಿಯವರೆಗಿನ ಮಳೆ ಮಾಹಿತಿಯಂತೆ 4ನೇ ಬಾರಿ ಇಷ್ಟೊಂದು ಪ್ರಮಾಣದ ಮಳೆ ಕೊರತೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. 1988ರ ಹಿಂಗಾರು ಅವಧಿಯಲ್ಲಿ ಶೇ.67, 1989ರಲ್ಲಿ ಶೇ.50, 2016ರಲ್ಲಿ ಶೇ.71 ಮಳೆ ಕೊರತೆಯಾಗಿತ್ತು. 2017ರ ಹಿಂಗಾರಿನಲ್ಲೂ ಇಷ್ಟು ಮಳೆ ಕೊರತೆಯಾಗಿರಲಿಲ್ಲ. 2010ರ ನಂತರ ಹಿಂಗಾರು ಅವಧಿಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿಲ್ಲ ಎಂದು ಕೆಎಸ್​ಎನ್​ಡಿಎಂಸಿ ತಿಳಿಸಿದೆ. 2018ರ ಹಿಂಗಾರಿನಲ್ಲಿ ಸೊರಬ, ಕಾರ್ಕಳ, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಹರಿಹರ, ಚಳ್ಳಕೆರೆ, ಚಿಕ್ಕನಾಯಕನಹಳ್ಳಿ, ಹೊಳಲ್ಕೆರೆ, ಪಾಂಡವಪುರ ತಾಲೂಕಿನಲ್ಲಷ್ಟೇ ವಾಡಿಕೆ ಮಳೆಯಾಗಿದೆ. 102 ತಾಲೂಕಿನಲ್ಲಿ ವಾಡಿಕೆ ಮಳೆ ಕೊರತೆಯಾಗಿದ್ದು, 64 ತಾಲೂಕಿನಲ್ಲಿ ಮಳೆ ತೀವ್ರ ಕೊರತೆಯಾಗಿದೆ. 2017ರಲ್ಲಿ ಇದೇ ಅವಧಿಯಲ್ಲಿ 27 ತಾಲೂಕಿನಲ್ಲಿ ವಾಡಿಕೆಗಿಂತ ಅಧಿಕ ಮಳೆ, 71 ತಾಲೂಕಿನಲ್ಲಿ ವಾಡಿಕೆ ಮಳೆ, 74 ತಾಲೂಕಿನಲ್ಲಿ ವಾಡಿಕೆ ಮಳೆ ಕೊರತೆ ಆಗಿತ್ತು. ಕೇವಲ 4 ತಾಲೂಕಿನಲ್ಲಿ ಮಳೆ ತೀವ್ರ ಕೊರತೆಯಾಗಿತ್ತು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...