More

    ಕೇಂದ್ರದ ನೆರವಿಗೆ ಕಾಯದೆ ಬರ ಪರಿಹಾರ ವಿತರಿಸಲಿ; ಬೊಮ್ಮಾಯಿ ಆಗ್ರಹ

    ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಕೆ, ಕೇಂದ್ರ ಅಧ್ಯಯನ ತಂಡ ಭೇಟಿ ಮಾಡಿ ವರದಿ ಸಲ್ಲಿಸುವ ತನಕ ಕಾಯದೆ ತಕ್ಷಣ ಬಾಧಿತರಿಗೆ ಬರ ಪರಿಹಾರ ವಿತರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.

    ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಬಿಜೆಪಿ ಆಡಳಿತಾವಧಿಯಲ್ಲಿ ಸಂಭವಿಸಿದ ನೆರೆಗೆ ತಕ್ಷಣ ಪರಿಹಾರ ವಿತರಿಸಲಾಗಿತ್ತು. ಕೇಂದ್ರ ಸರ್ಕಾರದ ನೆರವಿಗೆ ಕಾಯಲಿಲ್ಲ, ನಿಯಮಕ್ಕಿಂತ ಹೆಚ್ಚಿನ ಮೊತ್ತ ಪಾವತಿಸಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬಿತ್ತು ಎಂದು ನೆನಪಿಸಿದರು.

    ಮುಂಗಾರು ಮಳೆ ಕೈಕೊಟ್ಟಿದ್ದರಿಂದ ನೂರಾರು ತಾಲೂಕುಗಳು ಬರಗಾಲಕ್ಕೆ ತುತ್ತಾಗಿವೆ. ಎರಡು ಬೆಳೆ ಕಳೆದುಕೊಂಡ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಮೊದಲಿಗೆ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.

    ಬರ ಪರಿಹಾರ, ಕಾವೇರಿ ಜಲ ವಿವಾದ ಏನೇ ಇರಲಿ, ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಕಡೆಗೆ ಬೆರಳು ತೋರಿಸುವ ಚಾಳಿ ಬಿಡಲಿ. ಸಂಕಷ್ಟ ಸಂದರ್ಭದಲ್ಲಿ ಸರ್ಕಾರ ಯಾವ ರೀತಿ ವರ್ತಿಸುತ್ತದೆ ಎನ್ನುವುದರ ಮೇಲೆ ಸರ್ಕಾರದ ನಡೆ ಗೊತ್ತಾಗುತ್ತದೆ ಎಂದು ಬೊಮ್ಮಾಯಿ ತಿವಿದರು.

    ಕೆಟ್ಟ ಮೇಲೆ ಬುದ್ಧಿ ಬರುತ್ತಿದೆ

    ಕಾವೇರಿ ಕಣಿವೆ ಜಲಾಶಯಗಳಲ್ಲಿ ನೀರು ಖಾಲಿಯಾಗಿದೆ. ರಾಜ್ಯ ಸರ್ಕಾರಕ್ಕೆ ಕೆಟ್ಟ ಮೇಲೆ ಬರುತ್ತಿದ್ದು, ಈಗ ಕಾನೂನು ತಜ್ಞರು, ರೈತರನ್ನು ಕರೆದು ಮಾತನಾಡಿಸುತ್ತಿದೆ. ಈ ಕೆಲಸ ಮೊದಲೇ ಮಾಡಬೇಕಿತ್ತು ಎಂದು ಹೇಳಿದರು.

    ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವೆ ಹೊಂದಾಣಿಕೆಯಿಲ್ಲ. ನೀರು ನಿರ್ವಹಣಾ ಸಮಿತಿ ನೀಡಿದ ಆದೇಶದ ವಿಷಯದಲ್ಲಿ ಇವರಿಬ್ಬರೂ ತಳೆದು ನಿಲುವು ನಿದರ್ಶನ. ಈಗ ಊರು ಕೊಳ್ಳೆ ಹೊಡೆದ ಮೇಲೆ ಬಾಗಿಲು ಹಾಕಿದಂತೆ ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಬೊಮ್ಮಾಯಿ ಕುಟುಕಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts